ಶನಿವಾರಸಂತೆ, ಆ. ೧೦ : ಸಮೀಪದ ಕೊಡ್ಲಿಪೇಟೆಯಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಾ.೧೧ರಂದು (ಇಂದು) ಸಂಜೆ ೬.೩೦ ರಿಂದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ಪ್ರಯುಕ್ತ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಹೊಸ ಮುನ್ಸಿಪಾಲಿಟಿ ಶ್ರೀ ಗಣಪತಿ ದೇವಸ್ಥಾನದಿಂದ ಪ್ರಾರಂಭವಾಗುವ ಮೆರವಣಿಗೆ ಪಟ್ಟಣದ ಮುಖ್ಯಬೀದಿಗಳಲ್ಲಿ ಸಾಗಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸಮಾವೇಶಗೊಳ್ಳುತ್ತದೆ.

ಕಲ್ಯಾಣ ಮಂಟಪದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸ ಮುನ್ಸಿಪಾಲಿಟಿಯ ನಿವೃತ್ತ ಸೈನಿಕ ಕೆ.ಎಸ್. ದೇವರಾಜ್ ವಹಿಸುವರು. ಕರ್ನಾಟಕ ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಹ ಸಂಯೋಜಕ ದಾವಣಗೆರೆ ಸತೀಶ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.