ಮಡಿಕೇರಿ, ಆ. ೧೦: ಅರ್ವತ್ತೊಕ್ಲು ಸರ್ವದೈವತಾ ವಿದ್ಯಾಸಂಸ್ಥೆಯ ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಕೆಸರುಗದ್ದೆ ಕ್ರೀಡಾಕೂಟವನ್ನು ಸಂಸ್ಥೆಯ ಅಧ್ಯಕ್ಷರ ಗದ್ದೆಯಲ್ಲಿ ಆಯೋಜಿಸಲಾಗಿತ್ತು.

ಕ್ರೀಡಾಕೂಟಕ್ಕೆ ವಿದ್ಯಾಸಂಸ್ಥೆಯ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ ಅವರು ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ ಮತ್ತು ಓಟದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಕ್ರೀಡಾಕೂಟದಲ್ಲಿ ಮಾಜಿ ಪ್ರಾಂಶುಪಾಲೆ ಲಲಿತ ಮೊಣ್ಣಪ್ಪ, ಪ್ರಾಂಶುಪಾಲ ಪ್ರದೀಪ್ ಪಿ.ಆರ್., ಶಿಕ್ಷಕ ವೃಂದದವರು ಹಾಜರಿದ್ದರು. ಕ್ರೀಡಾಕೂಟವು ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ವಿ.ಎನ್. ಅವರ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನೆರವೇರಿತು.