ಮಡಿಕೇರಿ, ಆ. ೧೦: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೪-೨೫ನೇ ಸಾಲಿನಲ್ಲಿ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾAಶದ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

೨೦೨೩-೨೪ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿ://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‌ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. ೦೮೦-೨೨೩೭೪೮೩೨ ಮತ್ತು ೮೦೫೦೭೭೦೦೦೪ ಅಥವಾ ೮೦೫೦೭೭೦೦೦೫ ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ತಾ. ೩೧ ರೊಳಗೆ ಸೇವಾಸಿಂಧು ತಂತ್ರಾAಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ. ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.