ನಾಪೋಕ್ಲು, ಆ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಮಡಿಕೇರಿ ಯೋಜನಾ ಕಚೇರಿ ವ್ಯಾಪ್ತಿಯ ಭಾಗಮಂಡಲ ವಲಯದ ಕಕ್ಕಬೆ ಕಾರ್ಯಕ್ಷೇತ್ರದ ಕಕ್ಕಬೆ ಕೇಂದ್ರೀಯ ವಿದ್ಯಾಸಂಸ್ಥೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಅನಿಲ್ ರಾಜ್ ವಹಿಸಿ ಮಾತನಾಡಿ, ಮಾದಕ ವಸ್ತು ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾಹಿತಿ ನೀಡಿದರು.
ನಿವೃತ್ತ ಶಿಕ್ಷಕಿ ರೇಖಾ ಮಾತನಾಡಿ, ಮಾದಕ ವಸ್ತುಗಳ ಬಳಕೆ ಅವುಗಳ ಪರಿಣಾಮಗಳು ಹಾಗೂ ವಿದ್ಯಾರ್ಥಿ ಜೀವನದ ಮೇಲೆ ದುಷ್ಪರಿಣಾಮವನ್ನು ಕುರಿತು ಮಾಹಿತಿ ನೀಡಿದರು.
ವಲಯ ಮೇಲ್ವಿಚಾರಕ ಸುನಿಲ್ ಪ್ರಾಸ್ತಾವಿಕ ನುಡಿಯಾಡಿದರು.
ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಸರೋಜಿನಿ ಹಾಗೂ ಸೇವಾ ಪ್ರತಿನಿಧಿ ಉಮಾ ಲಕ್ಷಿö್ಮ, ಕೃಷಿ ಮೇಲ್ವಿಚಾರಕರು, ಸಹಶಿಕ್ಷಕರುಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.