ತರಬೇತಿ ವಿಮಾನ ಪತನ : ಇಬ್ಬರು ಪೈಲಟ್‌ಗಳಿಗೆ ಗಾಯ

ಗುನಾ, ಆ. ೧೧: ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನವೊಂದು ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಕೂದಲೆಳೆ ಅಂತರದಲ್ಲಿ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಪ್ರದೇಶದ ಗುನಾದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಖಾಸಗಿ ವಿಮಾನಯಾನ ಅಕಾಡೆಮಿಯ ತರಬೇತಿ ವಿಮಾನವು ಏರ್‌ಸ್ಟಿçಪ್‌ನಲ್ಲೇ ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ವಿಮಾನಯಾನ ಅಕಾಡೆಮಿಯ ಎರಡು ಆಸನಗಳ ಸೆಸ್ನಾ ೧೫೨ ವಿಮಾನವು ಮಧ್ಯಾಹ್ನ ೧.೩೦ ರ ಸುಮಾರಿಗೆ ಪತನಗೊಂಡಿದೆ ಎಂದು ಗುನಾ ಕ್ಯಾಂಟ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ರಜೋರಿಯಾ ತಿಳಿಸಿದ್ದಾರೆ. ಇಂಜಿನ್ ವೈಫಲ್ಯದಿಂದ ವಿಮಾನ ಪತನಗೊಂಡಿರುವ ಶಂಕೆ ವ್ಯಕ್ತವಾಗಿದ್ದು. ಅಪಘಾತಕ್ಕೂ ಮುನ್ನ ಅವರು ಸುಮಾರು ೪೦ ನಿಮಿಷಗಳ ಕಾಲ ಹಾರಾಟ ನಡೆಸಿದ್ದರು ಎಂದು ಅವರು ತಿಳಿಸಿದ್ದಾರೆ. ಪತನದ ಬಳಿಕ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದು, ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕೆಲವು ದಿನಗಳ ಹಿಂದೆ ಇಲ್ಲಿಗೆ ತರಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಬೀದರ್‌ನಲ್ಲಿ ಲಘು ಭೂಕಂಪನ : ಬೆಚ್ಚಿಬಿದ್ದ ಜನತೆ

ಬೀದರ್, ಆ. ೧೧: ಬೀದರ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ಭೂಕಂಪನವಾದ ಅನುಭವವಾಗಿದೆ. ಸಂಜೆ ಸುಮಾರು ೪.೨೬ರ ವೇಳೆಗೆ ಕೆಲವೇ ಸೆಕೆಂಡ್‌ಗಳು ಭೂಮಿ ಕಂಪಿಸಿದ್ದು, ಇದರಿಂದ ಜನತೆ ಬೆಚ್ಚಿಬಿದ್ದಿದ್ದಾರೆ. ಬೀದರ್ ಭೂಕಂಪ ರಹಿತ ವಲಯದಲ್ಲಿದ್ದು, ಈ ಪ್ರದೇಶದಲ್ಲಿ ಮೊದಲ ಬಾರಿಗೆ ೨.೬ ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಭೂಕಂಪಶಾಸ್ತçಜ್ಞರು ಹೇಳಿದ್ದಾರೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಸೀತಾಳಗೇರಾ ಜಿಪಿಯಿಂದ ನೈಋತ್ಯಕ್ಕೆ ೩.೫ ಕಿಲೋಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ಭೂಕಂಪನದ ವಲಯ-೨ ರಲ್ಲಿ ಭೂಕಂಪನದ ಕೇಂದ್ರವು ಬೀಳುತ್ತದೆ, ಅಲ್ಲಿ ಭೂಕಂಪದಿAದ ಹಾನಿಯಾಗುವ ಸಾಧ್ಯತೆಯು ತುಂಬಾ ಕಡಿಮೆಯಾಗಿದೆ. ಅಲ್ಲದೆ, ಟೆಕ್ಟೋನಿಕ್ ನಕ್ಷೆಯ ಪ್ರಕಾರ ಯಾವುದೇ ರಚನಾತ್ಮಕ ಸ್ಥಗಿತಗಳಿಂದ ಅಧಿಕೇಂದ್ರವು ಶೂನ್ಯವಾಗಿದೆ ಎಂದು ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ. ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಅವರ ಮಾಹಿತಿ ಆಧರಿಸಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೂ ಬೀದರ್ ಜಿಲ್ಲೆಯಲ್ಲಿ ಭೂಕಂಪನ ಆಗಿರುವುದನ್ನು ದೃಢೀಕರಿಸಿದ್ದಾರೆ.

ಬೆಂಗಳೂರು: ಅಕ್ರಮ ಸಂಬAಧಕ್ಕೆ ಅಡ್ಡಿಯಾದ ಪತಿಯ ಹತ್ಯೆ!

ಬೆಂಗಳೂರು, ಆ. ೧೧: ಅಕ್ರಮ ಸಂಬAಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಪತ್ನಿಯೊಬ್ಬಳು ಮೊಬೈಲ್ ಚಾರ್ಜಿಂಗ್ ಕೇಬಲ್‌ನಿಂದ ಪತಿಯ ಕತ್ತು ಬಿಗಿದು ಹತ್ಯೆ ಮಾಡಿರುವ ಘಟನೆ ವೈಟ್‌ಫೀಲ್ಡ್ ಬಳಿ ನಡೆದಿದೆ. ಮಹೇಶ್ (೩೬) ಹತ್ಯೆಯಾದ ದುರ್ದೈವಿ. ಆರೋಪಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ. ಹಾಸನ ಮೂಲದ ಮಹೇಶ್ ಮತ್ತು ತೇಜಸ್ವಿನಿ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದರು. ವೈಟ್‌ಫೀಲ್ಡ್ನ ಹಗದೂರಿನ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಮಹೇಶ್ ಆಟೋ ಚಾಲಕನಾಗಿದ್ದರೆ, ಪತ್ನಿ ತೇಜಸ್ವಿನಿ ಖಾಸಗಿ ಫೈನಾನ್ಸ್ನಲ್ಲಿ ಸಾಲ ಮಸೂಲಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ, ಕಳೆದ ವರ್ಷದಿಂದ ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಗಲಾಟೆ ಆಗುತ್ತಿತ್ತು. ಈ ನಡುವೆ ತೇಜಸ್ವಿನಿ, ತಾನು ಕೆಲಸ ಮಾಡುವ ಫೈನಾನ್ಸ್ ಕಂಪೆನಿಯಲ್ಲಿ ಗಜೇಂದ್ರ ಎಂಬಾತನೊAದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಬಳಿಕ ಇದು ಅಕ್ರಮ ಸಂಬAಧಕ್ಕೆ ತಿರುಗಿತ್ತು. ಈ ವಿಚಾರ ಮಹೇಶ್'ಗೆ ಗೊತ್ತಾಗಿ ತೇಜಸ್ವಿನಿಗೆ ಎಚ್ಚರಿಕೆ ನೀಡಿದ್ದ. ಬಳಿಕ ಗಜೇಂದ್ರನಿಗೂ ಕರೆ ಮಾಡಿ ಪತ್ನಿಯ ಸಹವಾಸಕ್ಕೆ ಬಾರದಂತೆ ಎಚ್ಚರಿಕೆ ನೀಡಿದ್ದ. ಈ ನಡುವೆ ಮಹೇಶ್ ಕೆಲಸಕ್ಕೆ ಹೋದಾಗ ತೇಜಸ್ವಿನಿ ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಮಧ್ಯಾಹ್ನದ ವೇಳೆ ಮಹೇಶ್ ಮನೆಗೆ ಬಂದಿದ್ದು, ಪತ್ನಿ ಜೊತೆಗೆ ಗಜೇಂದ್ರ ಇರುವುದನ್ನು ನೋಡಿದ್ದಾನೆ. ಇದರಿಂದ ಕೋಪಗೊಂಡು ಪತ್ನಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ ಗಜೇಂದ್ರನ ಮೇಲೂ ಹಲ್ಲೆ ನಡೆಸಿದ್ದಾನೆ. ಬಳಿಕ ತೇಜಸ್ವಿನಿ ಮತ್ತು ಗಜೇಂದ್ರ ಇಬ್ಬರೂ ಸೇರಿ ಮೊಬೈಲ್ ಚಾರ್ಜಿಂಗ್ ಕೇಬಲ್‌ನಿಂದ ಮಹೇಶನ ಕತ್ತು ಬಿಗಿದು ಹತ್ಯೆ ಮಾಡಿದ್ದಾರೆ. ಘಟನೆ ಬಳಿಕ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಸ್-ಆಟೋ ನಡುವೆ ಡಿಕ್ಕಿ : ಮೂವರು ಸಾವು

ಬೀದರ್, ಆ. ೧೧: ಬಸ್ ಆಟೋ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದ್ದು, ಸಂಪೂರ್ಣ ಜಖಂಗೊAಡಿದೆ. ಅಪಘಾತದಲ್ಲಿ ಅನಿತಾ ಬಾಯಿ (೪೫) ಮತ್ತು ಅವರ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿತರ ಮೂವರು ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್‌ನ ಹೊನ್ನಕೇರಿ ತಾಂಡಾ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಸಂಬAಧ ಜನವಾಡ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಜನವರಿಯಿಂದ ೯ ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ

ಬೆಂಗಳೂರು, ಆ. ೧೧: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ ೯,೦೩೫ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿದ ಸೊಳ್ಳೆಗಳ ಲಾರ್ವಾಗಳು ಕೊಚ್ಚಿಕೊಂಡು ಹೋಗುತ್ತಿದೆ. ಹೀಗಾಗಿ ದೈನಂದಿನ ಸರಾಸರಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿವೆ ಎಂದು ಹೇಳಿದ್ದಾರೆ. ಜೂನ್ ತಿಂಗಳಿನಲ್ಲಿ ಪ್ರತೀನಿತ್ಯ ೨೦೦ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ, ಆಗಸ್ಟ್ ೧ ರಿಂದ ೬ ರ ನಡುವೆ ೭೭೧ ಪ್ರಕರಣಗಳು ವರದಿಯಾಗಿವೆ. ಕಳೆದ ವಾರ ದೈನಂದಿನ ಸರಾಸರಿ ೧೩೦ಕ್ಕೆ ಇಳಿದಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಡೆಂಗ್ಯೂ ತಡೆಯಲು ಪಾಲಿಕೆ ಹಲವು ಪ್ರಕರಣಗಳನ್ನು ಕೈಗೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ೯೫೭ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, ಕಾಲೇಜುಗಳ ನರ್ಸಿಂಗ್ ವಿದ್ಯಾರ್ಥಿಗಳು ಸೇರಿ ೯೮೮ ಸ್ವಯಂಸೇವಕರು ಬಿಬಿಎಂಪಿಯೊAದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಡೆಂಗ್ಯೂ ಲಾರ್ವಾಗಳನ್ನು ನಾಶಪಡಿಸುವ ಮೂಲಕ ಹರಡುವಿಕೆಯನ್ನು ತಡೆಯಲು ಬಿಬಿಎಂಪಿ ವ್ಯಾಪ್ತಿಯಲ್ಲಿ ೬೦೦ ಸ್ಪೆçà ಮತ್ತು ಫಾಗಿಂಗ್ ಯಂತ್ರಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ. ಆಗಸ್ಟ್ ಮೊದಲ ಆರು ದಿನಗಳಲ್ಲಿ ೧೭೯ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಮಹದೇವಪುರ ಡೆಂಗ್ಯೂ ಹಾಟ್‌ಸ್ಪಾಟ್ ಆಗಿಯೇ ಉಳಿದಿದೆ. ಇದೇ ಅವಧಿಯಲ್ಲಿ ದಕ್ಷಿಣ ವಲಯದಲ್ಲಿ ೧೫೧ ಪ್ರಕರಣಗಳು ವರದಿಯಾಗಿದ್ದು, ಪೂರ್ವ ವಲಯದಲ್ಲಿ ೧೩೯ ಪ್ರಕರಣಗಳು ವರದಿಯಾಗಿವೆ. ನೀರು ನಿಲ್ಲುವುದು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ. ಹೀಗಾಗಿ ಕೊಳಚೆ ಪ್ರದೇಶಗಳಂತಹ ದುರ್ಬಲ ಪ್ರದೇಶಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಹೇಳಿದ್ದಾರೆ.