ಮಡಿಕೇರಿ, ಆ. ೧೧: ಕುಂದಚೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಟಾಸ್ಕ್ಫೋರ್ಸ್ ಸಭೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಿತು.
ಸಭೆಯಲ್ಲಿ ನೋಡಲ್ ಅಧಿಕಾರಿ ಅರುಣ್‌ಕುಮಾರ್, ಅರಣ್ಯಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದ ಉಂಟಾದ ನಷ್ಟಗಳ ಪರಿಶೀಲನೆ ನಡೆಸಿದರು. ಪದಕಲ್ಲು ಗ್ರಾಮದ ನಂದನಿ ಸೇತುವೆ ತೀವ್ರ ಹಾನಿಗೊಳಗಾಗಿದ್ದು, ದುರಸ್ತಿ ಕ್ರಮಕ್ಕಾಗಿ ಸಂಬAಧಪಟ್ಟ ಇಲಾಖೆಗೆ ವರದಿ ನೀಡಲಾಯಿತು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮಳೆ ಹಾನಿಯಿಂದ ಉಂಟಾದ ಸಮಸ್ಯೆಗಳ ಲಗ್ಗೆ ಗ್ರಾಮಸ್ಥರು ಸಭೆಯಲ್ಲಿ ಅಧಿಕಾರಿಗಳ ಗಮನ ಸೆಳೆದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಪಿ.ಬಿ. ಮಾತನಾಡಿ, ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಆಗಿರುವ ನಷ್ಟದ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು ಸಂಬAಧಪಟ್ಟ ಇಲಾಖೆಗಳಿಗೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸಿ ಕೊಡುವ ಭರವಸೆ ನೀಡಿದರು.ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಯಾಧವ್ ಉಪಸ್ಥಿತರಿದ್ದರು.