ಮಡಿಕೇರಿ, ಆ. ೧೧: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ೨೦೨೪-೨೫ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾAಶದ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

೨೦೨೩-೨೪ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿ://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್‌ಸೈಟ್ ತಿತಿತಿ.ಞm.mಜ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. ೦೮೦-೨೨೩೭೪೮೩೨ ಮತ್ತು ೮೦೫೦೭೭೦೦೦೪ ಅಥವಾ ೮೦೫೦೭೭೦೦೦೫ ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು.

ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ತಾ. ೩೧ ರೊಳಗೆ ಸೇವಾಸಿಂಧು ತಂತ್ರಾAಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ. ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕೇಂದ್ರ ಸರ್ಕಾರದ ರಾಷ್ಟಿçÃಯ ವಿದ್ಯಾರ್ಥಿ ವೇತನ ಯೋಜನೆಯಡಿ ೨೦೨೪-೨೫ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಪ್ರಿ-ಮೆಟ್ರಿಕ್ ಹಾಗೂ ಪೋಸ್ಟ್-ಮೆಟ್ರಿಕ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಓSP Poಡಿಣಚಿಟ ಮೂಲಕ hಣಣಠಿs://sಛಿhoಟಚಿಡಿshiಠಿs.gov.iಟಿ ತಂತ್ರಾAಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್‌ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, ೩೧ ಕೊನೆಯ ದಿನವಾಗಿದೆ.

ಕೊಡಗು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳ ಮೂಲಕ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ ಆಯಾಯ ಶಾಲಾ ಕಾಲೇಜುಗಳವರು ಕೇಂದ್ರ ಸರ್ಕಾರದ ಪೋರ್ಟ್ಲ್ ಮೂಲಕ ದಾಖಲಿಸಬೇಕಿದೆ. ಈ ಯೋಜನೆಯ ಸೌಲಭ್ಯವನ್ನು ವಿಶೇಷಚೇತನ ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಹರೀಶ್ ಟಿ.ಆರ್ ಮೊ.ಸಂ- ೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನವರು ರಾಜೇಶ್ ಮೊ.ಸಂ-೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.