ಕೂಡಿಗೆ, ಆ. ೧೨: ರಾಜ್ಯ ಸರಕಾರದ ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೃಷ್ಣ ಮೂರ್ತಿ ಕುಲಕರ್ಣಿ ಅವರು ಹಾರಂಗಿ ಅಣೆಕಟ್ಟೆಗೆ ಭೇಟಿ ನೀಡಿ ಅಣೆಕಟ್ಟೆಯ ಮುಖ್ಯ ದ್ವಾರಗಳ ಪರಿಶೀಲನೆ ನಡೆಸಿ , ಇಲಾಖೆಯ ಅಧಿಕಾರಿಗಳಿಂದ ಹಾರಂಗಿ ಜಲಾಶಯದ ನೀರಿನ ಮಟ್ಟ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಪಡೆದುಕೊಂಡರು.
ಈ ಸಂದರ್ಭ ಹಾರಂಗಿ ವೃತ್ತ ಅಧೀಕ್ಷಕ ಅಭಿಯಂತರ ಕೆ.ಕೆ.ರಘುಪತಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಐ. ಕೆ. ಪುಟ್ಟಸ್ವಾಮಿ, ಅಣೆಕಟ್ಟೆಯ ಉಸ್ತುವಾರಿ ಇಂಜಿನಿಯರ್ ಸಿದ್ದರಾಜ್ ಸೇರಿದಂತೆ ಕಿರಿಯ ಇಂಜಿನಿಯರ್ ಸೌಮ್ಯ, ಸಿಬ್ಬಂದಿ ವರ್ಗದವರು ಹಾಜರಿದ್ದರು.