ಕುಶಾಲನಗರ, ಆ. ೧೨: ಕೂಡುಮಂಗಳೂರು ಗ್ರಾ.ಪಂ.ನ ಸುಂದರನಗರದ ಸಮುದಾಯ ಭವನದಲ್ಲಿ ಡೆಂಗ್ಯೂ ಸಾಂಕ್ರಾಮಿಕ ರೋಗದ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಾಯಿತು.
ಈ ಕುರಿತು ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಷಂಶುದ್ದೀನ್ ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆÀಯನ್ನು ಕಾಪಾಡಬೇಕು. ಇದರಿಂದ ಡೆಂಗ್ಯೂ ರೋಗದಿಂದ ದೂರವಿರಬಹುದು ಎಂದು ಸಲಹೆ ನೀಡಿದರು.
ಈ ಸಂದರ್ಭ ಸುಂದರನಗರ ಅಂಗನವಾಡಿ ಶಿಕ್ಷಕಿ ಬೋಜಮ್ಮ, ಆಶಾ ಕಾರ್ಯಕರ್ತೆ ಸುಮಿತ್ರ, ಮಾಜಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಜಯಮ್ಮ ಹಾಗೂ ಗ್ರಾಮಸ್ಥರು ಇದ್ದರು.