ಕುಶಾಲನಗರ, ಆ. ೧೨: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಕುಶಾಲನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಂಜನ್ ಕೇಂದ್ರ ಸರ್ಕಾರಕ್ಕೆ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದುಗಳ ಪರಿಸ್ಥಿತಿ ಚಿಂತಾಜನಕವಾಗಿದೆ, ಹೆಣ್ಣು ಮಕ್ಕಳಿಗೆ ರಕ್ಷಣೆಯ ಕೊರತೆ ಎದುರಾಗಿದೆ. ಹಿಂದುಗಳ ಮೇಲೆ ದೌರ್ಜನ್ಯ ಅತಿರೇಕಕ್ಕೆ ತಿರುಗಿದ್ದು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕಾಗಿದೆ ಎಂದರು.

ಪ್ರತಿಭಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯ ಬಳಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೃತ್ಯವನ್ನು ಖಂಡಿಸಿದರು. ಈ ಸಂದರ್ಭ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಪ್ರಮುಖರಾದ ಬಿ.ಬಿ. ಭಾರತೀಶ್ ಜಿ.ಎಲ್. ನಾಗರಾಜ್, ಗೌತಮ್, ಎಂ.ಎA. ಚರಣ್, ಅಮೃತ್‌ರಾಜ್ ಸಂತೋಷ್ ಮಂಜುನಾಥ್ ಹೇರೂರು ಚಂದ್ರಶೇಖರ್, ಮಧುಸೂಧನ್, ಮಂಡೇಪAಡ ಬೋಸ್ ಮೊಣಪ್ಪ, ನವನೀತ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.