ಮಡಿಕೇರಿ, ಆ. ೧೨: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಧ್ಯಾಪಕರ (ಯುಜಿಸಿ-ನೆಟ್)ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್)ಪರೀಕ್ಷೆಗೆ ೪೫ ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ಆಸಕ್ತರು ಆಗಸ್ಟ್ ೯ ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯೊಳ ಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಕರಾಮುವಿ ಕುಲ ಸಚಿವರಾದ ಪ್ರೊ. ಕೆ.ಬಿ. ಪ್ರವೀಣ ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ೦೮೨೧-೨೫೧೫೯೪೪ ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿ ಕರಾಮುವಿ ಮಡಿಕೇರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ರವರು ತಿಳಿಸಿರುತ್ತಾರೆ.