ಮಡಿಕೇರಿ, ಆ. ೧೩: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಬೈಕ್ ರಿಪೇರಿ ಮತ್ತು ಸೇವೆ ಕುರಿತ ೩೦ ದಿನಗಳ ಉಚಿತ ತರಬೇತಿಯನ್ನು ತಾ. ೨೧ ರಿಂದ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ತಾ. ೧೭ ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: ೯೭೪೦೯೮೨೫೮೫, ೯೩೮೦೧೬೨೦೪೨ ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.