ವೀರಾಜಪೇಟೆ, ಆ. ೧೩: ವಿದ್ಯಾರ್ಥಿಗಳು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊAಡು ಮಾದಕ ದ್ರವ್ಯಗಳಿಂದ ದೂರವಿದ್ದು ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವುದರೊಂದಿಗೆ ತಮ್ಮ ಗುರಿ ಮುಟ್ಟುವಂತಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಕೊಡಗು ಉಪನಿರ್ದೇಶಕರಾದ ಕೆ. ಮಂಜುಳ ಕರೆ ನೀಡಿದರು.

ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ, ರಾಷ್ಟಿçÃಯ ಸೇವಾ ಯೋಜನಾ ಘಟಕ, ರೋವರ್ ಘಟಕ, ಮಾದಕ ದ್ರವ್ಯ ವಿರೋಧಿ ಘಟಕ ಹಾಗೂ ಇಎಲ್‌ಸಿ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಕೆಲಸಗಳಿಗೂ ಸಮಯವೇ ಮುಖ್ಯ. ಸಮಯವನ್ನು ವ್ಯರ್ಥಮಾಡಬಾರದು. ಸರಕಾರ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಸಮಾಜ ಸೇವಕರಾಗುವಂತೆ ಕರೆ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಕಡೆಗೆ ಹೆಚ್ಚು ಗಮನ ಹರಿಸುವ ಮೂಲಕ ತಮ್ಮ ಬದುಕು ರೂಪಿಸಿಕೊಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪಿ.ಎಸ್. ಪೆರಿಗ್ರೀನ್ ಮಚಾಡೋ ಮಾತನಾಡಿ, ದೇಶವನ್ನು ಉಳಿಸಿ ಬೆಳೆಸಲು ವಿದ್ಯಾರ್ಥಿಗಳಿಂದ ಸಾಧ್ಯ ಎಂದರು. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಎನ್.ಕೆ. ಜೋತಿ ಮಾತನಾಡಿ, ಉತ್ತಮ ಶಿಕ್ಷಣದಿಂದ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು. ನೆಲ್ಲಿಹುದಿಕೇರಿ ಕಾಲೇಜಿನ ಉಪನ್ಯಾಸಕ ಬಿ.ಎಂ. ನಳಂದ ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಇರುತ್ತದೆ ಅದನ್ನು ಉಪಯೋಗಿಸಿಕೊಂಡು ಬುದ್ಧಿವಂತಿಕೆಯಿAದ ಯಶಸ್ಸು ಕಾಣಬೇಕು ಎಂದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಮಂಜುಳ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಿತು. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಿರುಕಾಣಿಕೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಅಭಿವೃದ್ಧಿ ಸಮಿತಿಯ ಮುತ್ತಾ ಮತ್ತಿತರರು ಉಪಸ್ಥಿತರಿದ್ದರು, ಉಪನ್ಯಾಸಕರಾದ ಆರ್. ವಿನೋದ್ ಕುಮಾರ್ ಸ್ವಾಗತಿಸಿದರು, ವಿದ್ಯಾರ್ಥಿ ಸಂಘದ ಚಟುವಟಿಕೆಗಳ ವರದಿಯನ್ನು ಉಪನ್ಯಾಸಕರಾದ ಪಿ.ಎ. ಸುಜಾತ ಮಂಡಿಸಿದರು, ಪವಿತ್ರ ಕುಮಾರಿ ನಿರೂಪಿಸಿ, ಎಸ್.ಪಿ. ರೈಮಂಡ್ ವಂದಿಸಿದರು.