ಮಡಿಕೇರಿ, ಆ. ೧೩: ಇತ್ತೀಚೆಗೆ ನಿಧನರಾದ ಬೆಟ್ಟಗೇರಿ ಪ್ರಾ.ಕೃ.ಪ.ಸ. ಸಂಘದ ಸದಸ್ಯ ಎಡಿಕೇರಿ ಕೆ. ವಾಸುದೇವ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ತಾ. ೧೬ ರಂದು ಪೂರ್ವಾಹ್ನ ೧೦ ಗಂಟೆಗೆ ಬೆಟ್ಟಗೇರಿ ವಿಎಸ್ಎಸ್ಎನ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ರಾಜ್ಯ ವಿಧಾನ ಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ. ಬೋಪಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಬಿಜೆಪಿಯ ಪ್ರಮುಖ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಳೂರು ಎ. ಕಿಶೋರ್ಕುಮಾರ್ ತಿಳಿಸಿದ್ದಾರೆ.