ಕುಶಾಲನಗರ, ಆ.೧೩: ಸೋಮವಾರಪೇಟೆಯಲ್ಲಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಚಿನ್ನದ ವ್ಯಾಪಾರಿಯೊಬ್ಬ ಕುಶಾಲನಗರದಲ್ಲಿ ತನ್ನ ಮನೆಯಲ್ಲಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪಟ್ಟಣದ ರಾಧಾಕೃಷ್ಣ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಪ್ರದೀಪ್ ಆಚಾರ್ಯ (೫೨) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರದೀಪ ಆಚಾರ್ಯ ಕಳೆದ ಕೆಲವು ವರ್ಷಗಳಿಂದ ಸೋಮವಾರಪೇಟೆಯಲ್ಲಿ ತನ್ನ ಕುಟುಂಬದೊAದಿಗೆ ನೆಲೆಸಿದ್ದು ಇದೀಗ ಕಳೆದ ಒಂದು ವರ್ಷದ ಅವಧಿಯಿಂದ ಕುಶಾಲನಗರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಸೋಮವಾರಪೇಟೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಏಳು ಮಂದಿ ಬಂಧನಕ್ಕೆ ಒಳಗಾಗಿದ್ದು, ಪ್ರದೀಪ್ ಬಗ್ಗೆ ಪೊಲೀಸರಿಗೆ ಕೆಲವು ಮಾಹಿತಿಗಳು ದೊರೆತ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು.
ದರೋಡೆಕೋರರ ಮೂಲಕ ಚಿನ್ನಾಭರಣಗಳನ್ನು ಗಿರವಿ ಇಡುವ ಕಾಯಕದಲ್ಲಿ ಪ್ರದೀಪ ತೊಡಗಿಸಿಕೊಂಡಿರುವ ಬಗ್ಗೆ ಸುಳಿವು ಲಭಿಸಿದ ಪ್ರಕರಣದ ಬಗ್ಗೆ ವಿಚಾರಣೆ ಕೈಗೊಂಡಿದ್ದಾರೆ. ಈ ಬಗ್ಗೆ ಪ್ರದೀಪ್ ಈ ಹಿಂದೆ ದರೋಡೆ ಆರೋಪಿಗಳ ಮೂಲಕ ದರೋಡೆ ಮಾಡಿರುವ ಚಿನ್ನಾಭರಣಗಳನ್ನು ಗಿರವಿ ಇಟ್ಟುಕೊಂಡಿರುವ ಬಗ್ಗೆ ಪೊಲೀಸರಲ್ಲಿ ಹೇಳಿಕೆ ನೀಡಿರುವ ಬಗ್ಗೆಯೂ ಮಾಹಿತಿ ಹೊರ ಬಿದ್ದಿದೆ. ಈ ಸಂಬAಧ ಮುಂದಿನ ಕ್ರಮಕ್ಕೆ ಬೆದರಿದ ಪ್ರದೀಪ ಕುಶಾಲನಗರದ ತನ್ನ ಮನೆಯಲ್ಲಿ ಬೆಳಿಗ್ಗೆ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಕ್ಷಣ ಕುಟುಂಬ ಸದಸ್ಯರು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದು ಈ ವೇಳೆಗಾಗಲೇ ಪ್ರದೀಪ್ ಮೃತಪಟ್ಟಿದ್ದಾರೆ. ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಮೃತ ಪ್ರದೀಪ್ ಮೂಲತಃ ಮಂಗಳೂರಿನ ಗುರುಪುರ ನಿವಾಸಿಯಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.