ಗೋಣಿಕೊಪ್ಪ ವರದಿ, ಆ. ೧೩: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕುಂದ ಗ್ರಾಮದ ಬಸವೇಶ್ವರ ಕಾಲೋನಿ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.

೬೫ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಆರೋಗ್ಯ ರಕ್ಷಾ, ಸಂಪೂರ್ಣ ಸುರಕ್ಷಾ, ಮಾಸಾಶನ, ಜನಮಂಗಲ, ಜ್ಞಾನವಿಕಾಸ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ವೈ.ಬಿ. ಗಪ್ಪು ಬುಡಕಟ್ಟು ಜನಾಂಗ ತಮ್ಮ ಮಕ್ಕಳ ವಿದ್ಯಾಭ್ಯಾಸ ಹಾಗೂ ಪ್ರಗತಿಗಾಗಿ ಶ್ರಮಿಸುವಂತೆ ಕರೆ ನೀಡಿದರು.

ಅರ್ವತೋಕ್ಲು ಸರ್ವದೈವತಾ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾ ಬೋಪಣ್ಣ, ಯೋಜನೆಯ ವೀರಾಜಪೇಟೆ ತಾಲೂಕಿನ ಯೋಜನಾಧಿಕಾರಿ ದಿನೇಶ್, ಪೊನ್ನಂಪೇಟೆ ಒಕ್ಕೂಟದ ಅಧ್ಯಕ್ಷೆ ಪೆಮ್ಮಂಡ ಸುಮನ್ ಉಮೇಶ್, ಮೇಲ್ವಿಚಾರಕರಾದ ನಾಗರಾಜ್, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಖಾ ಶ್ರೀಧರ್, ಸೇವಾ ಪ್ರತಿನಿಧಿಗಳಾದ ಚೋಂದು, ಗೌರಿ, ರೋಹಿಣಿ, ಮೋಸಿನ, ಶಾಲಿನಿ ಇದ್ದರು.