ಕುಶಾಲನಗರ, ಆ. ೧೩: ಸ್ವಾತಂತ್ರö್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟçಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಲು, ಪ್ಲಾಸ್ಟಿಕ್ ಧ್ವಜಗಳ ಮಾರಾಟ ನಿಷೇಧಿಸುವ ಉದ್ದೇಶ ದಿಂದ ಹಿಂದೂ ಜನಜಾಗೃತಿ ಸಮಿತಿ ಯಿಂದ ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಷ್ಟç ಧ್ವಜವು ರಾಷ್ಟçದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ ೧೫ ಮತ್ತು ಜನವರಿ ೨೬ ರಂದು ರಾಷ್ಟç ಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ.
ಆದರೆ ಕಾಗದದ, ಪ್ಲಾಸ್ಟಿಕ್ನ ಸಣ್ಣ ಸಣ್ಣ ರಾಷ್ಟç ಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳ ಬಳಕೆಗೆ ನಿರ್ಬಂಧಿಸಿ ಕ್ರಮ ಕೈಗೊಳ್ಳಬೇಕು.
ಪ್ಲಾಸ್ಟಿಕ್ ರಾಷ್ಟç ಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ‘ಲಾಂಛನಗಳು ಮತ್ತು ಹೆಸರುಗಳ ಕಾಯ್ದೆ ೧೯೫೦ ಮತ್ತು ರಾಷ್ಟಿçÃಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆ ೧೯೭೧’ ಉಲ್ಲಂಘನೆ ಯಾಗುತ್ತಿರುವುದನ್ನು ತಡೆಗಟ್ಟಬೇಕು.ಹಾಗಾಗಿ ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಶಾಲನಗರದ ತಹಶೀಲ್ದಾರ್ ಕಿರಣ್ ಗೌರಯ್ಯ ಅವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು.
ಶ್ರೀ ಮುತ್ತಪ್ಪ ದೇವಸ್ಥಾನದ ಪವನ್ ಬಿದ್ದಪ್ಪ, ಆರ್ಯವೈಶ್ಯ ಮಂಡಳಿಯ ಬಿ.ಎಲ್. ಅಶೋಕ್ ಕುಮಾರ್, ಬಿ.ಎಲ್. ಸತೀಶ್, ನಟರಾಜ್, ಅಶೋಕ್ ರಾವಲ್, ಪ್ರಮುಖರಾದ ಸೋಮಶೇಖರ್ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರಾದ ಅಮೃತ್ ರಾಜ್ ಇದ್ದರು.