ನಾಪೋಕ್ಲು, ಆ. ೧೩: ಮೂರ್ನಾಡು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸ್ಥಳೀಯ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕ ಸಂಘದ ಸದಸ್ಯರು ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಮೂರ್ನಾಡು ಪ್ರಾಥಮಿಕ ಶಾಲೆಗೆ ಹೋಗುವ ಮಾರ್ಗ ಮತ್ತು ಶಾಲೆಯ ಆವರಣವನ್ನು ಶುಚಿಗೊಳಿಸುವ ಕಾರ್ಯ ಹಮ್ಮಿಕೊಂಡರು. ನಾಪೋಕ್ಲು ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ ಗಂಟೆಗಳನ್ನು ತೆರವುಗೊಳಿಸಿ, ರಸ್ತೆ ಬದಿಯಲ್ಲಿದ್ದ ತ್ಯಾಜ್ಯ ವಸ್ತುಗಳ ಎಲ್ಲವನ್ನು ತೆರವು ಮಾಡಿ ಶ್ರಮದಾನಗೈದಿದ್ದಾರೆ.