ಸುಂಟಿಕೊಪ್ಪ, ಆ. ೧೩: ಸುಂಟಿಕೊಪ್ಪ ಪಟ್ಟಣದ ಮಧ್ಯ ಭಾಗದಲ್ಲಿ ಹಾದುಹೋಗುವ ರಾಷ್ಟಿçÃಯ ಹೆದ್ದಾರಿಯು ತುಂಬಾ ಕಿರಿದಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲ್ಲಿಸುವುದರಿಂದ ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ.
ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆೆ. ರಸ್ತೆಯ ಇಕ್ಕೆಲಗಳಲ್ಲಿರುವ ವಾಣಿಜ್ಯ ಮಳಿಗೆಗಳು ಹಾಗೂ ಕಲ್ಯಾಣ ಮಂಟಪಗಳಿಗೆ ಆಗಮಿಸುವ ಮಂದಿ ವಾಹನಗಳÀನ್ನು ಮನಬಂದAತೆ ಹೆದ್ದಾರಿಯ ೨ ಬದಿಗಳಲ್ಲಿ ನಿಲ್ಲಿಸುತ್ತಿರುವುದರಿಂದ ವಾಹನಗಳ ದಟ್ಟಣೆಯಿಂದ ಹೆದ್ದಾರಿಯಲ್ಲಿ ಬಸ್, ಟ್ರಕ್, ಕಾರು, ಜೀಪ್ ಹಾಗೂ ಆ್ಯಂಬ್ಯುಲೆನ್ಸ್ ವಾಹನಗಳು ಸುಗಮವಾಗಿ ಸಂಚರಿಸಲು ಪರದಾಡುವ ಪರಿಸ್ಥಿತಿ ಎದುರಾಗುತ್ತಿದೆ.
ರಾಷ್ಟಿçÃಯ ಹೆದ್ದಾರಿಯು ಸುಂಟಿಕೊಪ್ಪದಿAದ ಗದ್ದೆಹಳ್ಳದವರೆಗೆ ತಿರುವುಗಳಿಂದ ಕೂಡಿದ್ದು, ಹೆದ್ದಾರಿಯಲ್ಲಿ ೨ ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಮಸ್ಯೆ ಎದುರಾಗಿದೆ. ಹೆದ್ದಾರಿಯಲ್ಲಿ ೨ ವಾಹನಗಳು ಸುಗಮವಾಗಿ ಸಂಚರಿಸುವುದೂ ಕ್ಲಿಷ್ಟಕರ. ಅಲ್ಲದೆ ಅಪಘಾತಗಳಿಗೆ ಆಹ್ವಾನ ನೀಡುವಂತಿದೆ.
ಸಾಮಾನ್ಯವಾಗಿ ಬಹುಪಯೋಗಿ ಕಟ್ಟಡಗಳನ್ನು ಕಟ್ಟುವ ಸಂದರ್ಭ ನೆಲ ಅಂತಸ್ತಿನಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳಿಗೆ ನಿಲುಗಡೆ ಜಾಗವನ್ನು ಕಲ್ಪಿಸುವುದು ಅತ್ಯಗತ್ಯವಾಗಿದೆ. ಕಟ್ಟಡ ನಿರ್ಮಾಣ ಸಂದರ್ಭದಲ್ಲೇ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಬೇಕೆಂಬ ಷರತ್ತು ವಿಧಿಸಿಯೇ ಅನುಮತಿ ಪತ್ರವನ್ನು ಸಂಬAಧಿಸಿದ ಇಲಾಖೆಗಳು ನೀಡಬೇಕಾಗಿದ್ದು ಅಗತ್ಯವಾಗಿದೆ. ಇದನ್ನು ಪಾಲಿಸುವಲ್ಲಿ ಸಂಪೂರ್ಣ ವಿಫಲತೆ ಕಂಡಿರುವುದು ರಸ್ತೆ ಬದಿಯ ೨ ಕಡೆಗಳಲ್ಲಿ ವಾಹನ ನಿಲುಗಡೆಗೊಂಡು ಸಮಸ್ಯೆ ಎದುರಾಗುತ್ತಿದೆ. ವಿಶೇಷವಾಗಿ ವಾರಾಂತ್ಯಗಳಲ್ಲಿ ಮತ್ತು ಸರಣಿ ರಜೆ ದಿನಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಕಂಡುಬರುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲಿ ತಿರುವು ಪ್ರದೇಶಗಳಲ್ಲಿ ವಾಹನಗಳನ್ನು ಮನಬಂದAತೆ ನಿಲ್ಲಿಸುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆ ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ವಾಹನ ದಟ್ಟಣೆಯನ್ನು, ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತದಿಂದಾಗುವ ಸಾವು ನೋವುಗಳನ್ನು ತಪ್ಪಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
- ರಾಜು ರೈ