ಸೋಮವಾರಪೇಟೆ, ಆ. ೧೪: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ದೆಹಲಿಯಲ್ಲಿ ನಡೆಸಲು ಉದ್ದೇಶಿಸಿರುವ ವೀರಭದ್ರ ವರ್ಧಂತಿ ಮಹೋತ್ಸವಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆಶ್ರಮದಲ್ಲಿ ರವಿಶಂಕರ್ ಗುರೂಜಿ ಅವರನ್ನು ಭೇಟಿ ಮಾಡಿದ ರಾಜ್ಯದ ವಿವಿಧ ಭಾಗಗಳ ಮಠಾಧೀಶರ ತಂಡ, ಕಳೆದ ೬ ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಈ ರಾಷ್ಟçದ ಸಂಸ್ಕೃತಿ ರಕ್ಷಕ, ಆಂಜನೇಯ ಸ್ವಾಮಿಗೆ ಲಿಂಗದೀಕ್ಷೆ ನೀಡಿದ ವೀರಭದ್ರ ದೇವರ ಜಯಂತಿ ಆಚರಿಸಿಕೊಂಡು ಬರುತ್ತಿದೆ ಹಾಗೂ ಅವರ ಹೆಸರಿನಲ್ಲಿ ರಾಷ್ಟಿçÃಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಬಾರಿ ರಾಷ್ಟç ರಾಜಧಾನಿ ದೆಹಲಿಯ ಭಾರತ್ ಮಂದಿರದಲ್ಲಿ ನಡೆಯಲಿರುವ ವೀರಭದ್ರೇಶ್ವರ ವರ್ಧಂತಿ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಸಾನ್ನಿಧ್ಯ ವಹಿಸುವುದರೊಂದಿಗೆ ಅಗತ್ಯ ಮಾರ್ಗದರ್ಶನ ಮಾಡಬೇಕೆಂದು ಕೋರಿದರು.