ಪೊನ್ನಂಪೇಟೆ, ಆ. ೧೪: ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಆರೋಗ್ಯವಂತ ಭಾರತಕ್ಕೆ ಆರೋಗ್ಯವಂತ ಯುವಜನತೆ ಎಂಬ ಧ್ಯೇಯ ವಾಕ್ಯದಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು.

೭೮ನೇ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರವು ನಶಾಮುಕ್ತ ಭಾರತ ಅಭಿಯಾನದಡಿ ಮಾದಕ ವಸ್ತು ಸೇವನೆ ಮಾಡದಿರಲು, ಭಾರತದ ಯುವಜನತೆಯಲ್ಲಿ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ರೂಪಿಸಿದೆ. ಇತ್ತೀಚಿನ ದಿನಗಳಲ್ಲಿ ಯುವಜನತೆ ಮಾದಕ ವಸ್ತು ಸೇವನೆಯಿಂದ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತಿದೆ. ಆದ್ದರಿಂದ ಇಂತಹ ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವುದರ ಕಡೆಗೆ ಕಾರ್ಯಪ್ರವೃತ್ತರಾಗಬೇಕು. ಸ್ವಾಸ್ಥö್ಯ ಮತ್ತು ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡುವ ನೇತಾರರಾಗಬೇಕು ಎಂಬ ಇಂಗಿತದೊAದಿಗೆ ಈ ಅಭಿಯಾನ ರೂಪಿತವಾಗಿದೆ.

ಆದ್ದರಿಂದ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಅಭಿಯಾನದ ಸದುದ್ದೇಶವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಪ್ರಾರ್ಥನಾ ಸಭೆಯಲ್ಲಿ ದ್ವಿತೀಯ ಪಿ.ಯು. ವಿದ್ಯಾರ್ಥಿನಿ ದಿತ್ತ್ಯಾ ದೇಚಮ್ಮ ಎಂ.ವಿ. ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ವಿದ್ಯಾರ್ಥಿ ವೃಂದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದದವರು ಹಾಜರಿದ್ದರು.