*ಗೋಣಿಕೊಪ್ಪ: ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಪೊನ್ನಂಪೇಟೆ ಸಂತ ಅಂತೋಣಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟಿçÃಯ ಚಿಹ್ನೆ ಮತ್ತು ರಾಷ್ಟçಧ್ವಜದ ಚಿತ್ರ ಬಿಡಿಸಿ ಅರಿವು ಮೂಡಿಸಲಾಯಿತು.

ಜತೆಗೆ ರಾಷ್ಟçಧ್ವಜ, ರಾಷ್ಟçಗೀತೆಯ ಮಹತ್ವ, ಪ್ಲಾಸ್ಟಿಕ್ ಮುಕ್ತ ಸ್ವಾತಂತ್ರ‍್ಯ ದಿನಾಚರಣೆ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ರಜನಿ, ಶಿಕ್ಷಕರುಗಳಾದ ರಶ್ಮಿ, ಪೌಶಿಕ ,ಗೀತಾ, ಉಷಾ ,ಶಾಂತ, ರೋಹಿಣಿ, ಚೈತ್ರ, ಹರ್ಷಿತಾ ಇದ್ದರು.ಕೂಡಿಗೆ : ಕುಶಾಲನಗರ ತಾಲೂಕು ಕಂದಾಯ ಇಲಾಖೆಯ ವತಿಯಿಂದ ಕಣಿವೆಯ ತೂಗುಸೇತುವೆ ಮೇಲೆ ಪ್ರವಾಸಿಗರು ಮತ್ತು ಸ್ಥಳೀಯ ಯುವಕರು ಸೇರಿದಂತೆ ಸಾರ್ವಜನಿಕರು ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮವನ್ನು ಆಚರಿಸಿದರು.

ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ಪರಿವೀಕ್ಷಕ ಸಂತೋಷ, ಸಾರ್ವಜನಿಕರು ಭಾಗವಹಿಸಿದ್ದರು.

ಸಿದ್ದಾಪುರ : ಸ್ವಾತಂತ್ರೊö್ಯÃತ್ಸವ ಆಚರಣೆ ಅಂಗವಾಗಿ ಸಿದ್ದಾಪುರದ ಗ್ರಾಮ ಪಂಚಾಯಿತಿ ವತಿಯಿಂದ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಫೀಕ್, ಕಾರ್ಯದರ್ಶಿ ಮೋಹನ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು, ಸಿಬ್ಬಂದಿಗಳು ಹಾಜರಿದ್ದರುನಾಪೋಕ್ಲು : ಎಮ್ಮೆಮಾಡು ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳೊಂದಿಗೆ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹರ್ ಘÀರ್ ತಿರಂಗಾದ ಮಹತ್ವವನ್ನು ಸಾರುತ್ತಾ ಪ್ರೌಢಶಾಲಾ ಮೈದಾನದಿಂದ ಎಮ್ಮೆಮಾಡು ಪಟ್ಟಣಕ್ಕಾಗಿ ಹಾದು ಗ್ರಾಮ ಪಂಚಾಯಿತಿಯವರೆಗೆ ಜಾಥಾ ನಡೆಸಲಾಯಿತು. ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಚಕ್ಕೇರ ಇಸ್ಮಾಯಿಲ್, ಗಫೂರ್ ಪಡಿಯಾಣಿ, ಯೂಸೂಫ್ ಟಿ.ಕೆ. ತಮ್ಮ ಅನಿಸಿಕೆ ವ್ಯಕ್ತಪಡಿಸಿ ರಾಷ್ಟçಭಕ್ತಿಯ ಬಗ್ಗೆ ಸಂದೇಶ ನೀಡಿದರು.

ಈ ಸಂದರ್ಭ ಉಪಾಧ್ಯಕ್ಷೆ ಚಂಬಾರAಡ ಐಸಮ್ಮ ಮತ್ತು ಸದಸ್ಯರಾದ ಆಯಿಷ, ಕಂಬೇರ ಅಬ್ಸತ್ ಮತ್ತು ಪ್ರೌಢಶಾಲೆ ಮುಖ್ಯೋಪಾಧ್ಯಾಯ ಪ್ರಸನ್ನ ಕುಮಾರ್, ಕಾರ್ಯದರ್ಶಿ ಪಾರ್ವತಿ ಮತ್ತು ಪರಂಬು ಪಡಿಯಾಣಿ ಎಮ್ಮೆಮಾಡು ಪ್ರಾಥಮಿಕ ಶಾಲೆಯ ಅಧ್ಯಾಪಕರ ವೃಂದ ಮತ್ತು ಸಾರ್ವಜನಿಕರು ಹಾಗೂ ಪಂಚಾಯಿತಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು. ಕುಶಾಲನಗರ, ಆ. ೧೪: ಸ್ವಾತಂತ್ರ‍್ಯೋತ್ಸವ ಅಂಗವಾಗಿ ಕುಶಾಶನಗರ ತಾಲೂಕು ವ್ಯಾಪ್ತಿಯ ವಿವಿಧ ಕಡೆ ಹರ್ ಘರ್ ತಿರಂಗಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ನೇತೃತ್ವದಲ್ಲಿ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಕುಶಾಲನಗರ ಪುರಸಭೆ ಕಚೇರಿ, ಹಾರಂಗಿ ಅಣೆಕಟ್ಟು ಮುಂಭಾಗ ಮತ್ತು ದುಬಾರೆ ಪ್ರವಾಸಿ ಕೇಂದ್ರದಲ್ಲಿ ತಿರಂಗಾ ಸಂಭ್ರಮ ಕಾರ್ಯಕ್ರಮಗಳು ಜರುಗಿದವು.

ತಹಶೀಲ್ದಾರ್ ಕಿರಣ್ ಗೌರಯ್ಯ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಹಾರಂಗಿ ಅಣೆಕಟ್ಟೆ ಅಧಿಕಾರಿಗಳು, ಜನಪ್ರತಿನಿಧಿಗಳು ದುಬಾರೆಯ ಸಂಘ ಸಂಸ್ಥೆಗಳ ಪ್ರಮುಖರು, ಪ್ರವಾಸಿಗರು ತಿರಂಗಾ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.