ಕಣಿವೆ, ಆ. ೧೬: ಕುಶಾಲನಗರದ ಅನುಗ್ರಹ ಪದವಿ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ಮತ್ತು ಬಿ.ಸಿ.ಎ. ವಿದ್ಯಾರ್ಥಿಗಳಿಗೆ ‘ಓರಿಯಂಟೇಶನ್’ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ಮಾತನಾಡಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಗುಣ ನಡತೆಯನ್ನು ಮೈಗೂಡಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬೇಕೆಂದರು.
ಉಪನ್ಯಾಸಕರಾದ ನೌಶದ್, ಕಾಲೇಜಿನ ನಿಯಮಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಈ ಸಂದರ್ಭ ಶಿಕ್ಷಣ ಇಲಾಖೆಯ ಆದೇಶದ ಮೇರೆಗೆ ‘ನಿಶಾಮುಕ್ತ ಭಾರತ್ ಅಭಿಯಾನ' ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಲಾಯಿತು. ನಂತರ ವಿದ್ಯಾರ್ಥಿಗಳು ತಾವು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದರು.