ಬೆAಗಳೂರು, ಆ ೧೬: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: ೦೧.೦೧.೨೦೨೫ ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊAಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳAತೆ ೧೮ ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನ ಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆ ಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ. ಸಾರ್ವಜನಿಕರು ಅರ್ಜಿ ನಮೂನೆ ೬ ಮತ್ತು ೮ಗಳನ್ನು ಸಲ್ಲಿಸುವಾಗ ಸ್ವಯಂಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ.
ಎಲ್ಲಾ ರೀತಿಯ ಚುನಾವಣಾ ಸಂಬAಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ನಲ್ಲಿ ಗಿoಣeಡಿ ಊeಟಠಿಟiಟಿe ಚಿಠಿಠಿಟiಛಿಚಿಣioಟಿ ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
೨೦ ಆಗಸ್ಟ್ ೨೦೨೪ ರಿಂದ ೧೮ ಅಕ್ಟೋಬರ್ ೨೦೨೪ ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ/ಮರು ಹೊಂದಾಣಿಕೆ ಸೇರಿದಂತೆ ಮತದಾರರ ಪಟ್ಟಿ/ಮತದಾರರ ಗುರುತಿನ ಚೀಟಿಗಳಲ್ಲಿನ ಲೋಪದೋಷಗಳನ್ನು ತೆಗೆದುಹಾಕುವುದು. ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಖಾತ್ರಿಪಡಿಸುವುದು. ವಿಭಾಗ/ಭಾಗಗಳ ಮರುಹೊಂದಾಣಿಕೆ ಹಾಗೂ ಪ್ರಸ್ತಾಪಿತ ವಿಭಾಗ/ಭಾಗಗಳ ಮತಗಟ್ಟೆಗಳ ಸ್ಥಳವನ್ನು ಅಂತಿಮ ಗೊಳಿಸುವಿಕೆ ಮತ್ತು ಮತಗಟ್ಟೆಗಳ ಪಟ್ಟಿಗಳಿಗೆ ಅನುಮೋದನೆ ಪಡೆದು ಕೊಳ್ಳುವುದು. ನ್ಯೂನತೆಗಳ ಗುರುತಿಸುವಿಕೆ ಮತ್ತು ಅಂತಹ ನ್ಯೂನತೆ ಗಳನ್ನು ನಿವಾರಿಸಲು ಕಾರ್ಯತಂತ್ರ ಮತ್ತು ಕಾಲಾವಧಿಯನ್ನು ಅಂತಿಮ ಗೊಳಿಸುವುದು ಮತ್ತು ನಿಯಂತ್ರಣ ಕೋಷ್ಟಕದ ನವೀಕರಣ ನಡೆಯಲಿದೆ.
ಅಕ್ಟೋಬರ್ ೧೯ ರಿಂದ ೨೮ ರವರೆಗೆ ನಮೂನೆ ೧ ರಿಂದ ೮ ರ ತಯಾರಿ ಹಾಗೂ ಅರ್ಹತಾ ದಿನಾಂಕ ೦೧.೦೧.೨೦೨೫ ರಂತೆ ಸಮಗ್ರ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಅಕ್ಟೋಬರ್ ೨೯ ರಂದು ಸಮಗ್ರ ಕರಡು ಮತದಾರರ ಪಟ್ಟಿಯ ಪ್ರಕಟಣೆ, ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ ಅ. ೨೯ರಿಂದ ೨೮ ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಯ ಅವಧಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನಿಗದಿಪಡಿಸುವ ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರದಲ್ಲಿ ಗೊತ್ತುಪಡಿಸಲಾಗುವುದು.
ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿಯನ್ನು ಡಿ.೨೪.೧೨.೨೦೨೪ ರೊಳಗೆ ಮುಗಿಸಲಾಗುವುದು. ೦೧.೦೧.೨೦೨೫ ರೊಳಗೆ ಮತದಾರರ ಪಟ್ಟಿಗಳ ಗುಣಮಟ್ಟ ಪರಿಶೀಲನೆ ಮಾಡುವುದು ಹಾಗೂ ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿ ಯನ್ನು ಪಡೆಯುವುದು ಮತ್ತು ದತ್ತಾಂಶ ವನ್ನು ನವೀಕರಿಸುವುದು ಮತ್ತು ಪೂರಕಗಳ ಮುದ್ರಣ ಮಾಡಲಾಗು ವುದು. ೦೬.೦೧.೨೦೨೫ ರಂದು ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.