ಮಡಿಕೇರಿ, ಆ. ೧೫: ನಕಲಿ ನಾಡ ಬಂದೂಕು ತಯಾರಿ ಪ್ರಕರಣಕ್ಕೆ ಸಂಬAಧಿಸಿದAತೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಭಾಗಮAಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ನಕಲಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯನ್ವಯ ದಾಳಿ ನಡೆಸಿದ ಪೊಲೀಸರು ಬಂದೂಕು ತಯಾರಿ ಮಾಡುತ್ತಿದ್ದ ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ (೫೨) ಎಂಬಾತನನ್ನು ಬಂಧಿಸಿ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಗ್ರಿಗಳು ಮತ್ತು ೨ ನಾಡ ಬಂದೂಕು (ಎಸ್‌ಬಿಬಿಎಲ್) ೧ ನಾಡ ಪಿಸ್ತೂಲನ್ನು ವಶಕ್ಕೆ ಪಡೆದಿದ್ದರು. ನಂತರ ತನಿಖೆ ಮುಂದುವರೆಸಿದ್ದ ಪೊಲೀಸರು ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿದ ನಕಲಿ ನಾಡ ಬಂದೂಕುಗಳನ್ನು ಖರೀದಿಸಿದ್ದ ಕರಿಕೆ ಚೆತ್ತುಕಾಯ ಗ್ರಾಮದ ಎನ್.ಜೆ. ಶಿವರಾಮ (೪೫), ಪಿರಿಯಾಪಟ್ಟಣ ಮಾಗಳಿ ಗ್ರಾಮದ ಎಸ್.ರವಿ (೩೫), ಭಾಗಮಂಡಲ ದೊಡ್ಡಪುಲಿಕೋಟು ಗ್ರಾಮದ ಕೋಟಿ (೫೫) ಎಂಬವರುಗಳನ್ನು ಕೂಡ ಬಂಧಿಸಿ ತಲಾ ಒಂದೊAದು ನಾಡ ಬಂದೂಕು (ಎಸ್‌ಬಿಬಿಎಲ್)ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು ೫ ನಾಡ ಬಂದೂಕು, ೧ ನಾಡ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ.

ಎಸ್ಪಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಭಾಗಮಂಡಲ ಠಾಣಾಧಿಕಾರಿ ಶೋಭಾ ಲಮಾಣಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.