ಕೂಡಿಗೆ, ಆ. ೧೫: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮತ್ತು ಸಂಘದ ಕುಶಾಲನಗರ ವಲಯದ ವತಿಯಿಂದ ಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್, ಎನ್.ಎಸ್.ಎಸ್. ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಪರಿಸರ ಮಾಹಿತಿ ಕಾರ್ಯಕ್ರಮ: ೨೦೨೪ ರ ಅಂಗವಾಗಿ ಶಾಲಾವರಣದಲ್ಲಿ ಅರಣ್ಯ ಸಸಿನೆಟ್ಟು ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಲಾಯಿತು.
ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಮಾತನಾಡಿ, ಮುಂದಿನ ಉತ್ತಮ ಭವಿಷ್ಯಕ್ಕಾಗಿ ನಾವು ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದರು.
ಅರಣ್ಯ ಗಿಡಗಳನ್ನು ನೆಡಲು ವಿದ್ಯಾರ್ಥಿಗಳು ಹಾಗೂ ಜನರನ್ನು ಪ್ರೋತ್ಸಾಹಿಸಲು ಸರ್ಕಾರವು ವಿವಿಧ ಹಂತಗಳಲ್ಲಿ ವಿವಿಧ ನೆಡುತೋಪು ಅಭಿಯಾನಗಳನ್ನು ಆಯೋಜಿಸುತ್ತಿದೆ.
ಪ್ರತಿಯೊಬ್ಬರೂ ಪ್ರಕೃತಿ ಮಾತೆಯಾದ ತಮ್ಮ ತಾಯಿ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಸಲಹೆ ನೀಡಿದರು.
ನಾವೆಲ್ಲರೂ ನಮ್ಮ ಸುತ್ತಮುತ್ತಲಿನ ಜಾಗಗಳಲ್ಲಿ ಅರಣ್ಯ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.
ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ "ಪರಿಸರ ಸಂರಕ್ಷಣೆ" ಕುರಿತು ಮಾಹಿತಿ ನೀಡಿದ ಮುಖ್ಯ ಶಿಕ್ಷಕ ಟಿ.ಜಿ ಪ್ರೇಮಕುಮಾರ್, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಗಿಡ ನೆಟ್ಟು ಅದನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಉತ್ತಮ ಪರಿಸರ ನಿರ್ಮಾಣಕ್ಕೆ ಪಣ ತೊಡಬೇಕು ಎಂದರು.
ಧರ್ಮಸ್ಥಳ ಸಂಘದ ಕುಶಾಲನಗರ ವಲಯದ ಮೇಲ್ವಿಚಾರಕಿ ಪೂರ್ಣಿಮಾ ಪರಿಸರ ಮಾಹಿತಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಯೋಜನೆಯ ತಾಲೂಕು ಕೃಷಿ ಅಧಿಕಾರಿ ರಾಜಣ್ಣ ಸಂಘದ ಧ್ಯೇಯೋದ್ದೇಶಗಳನ್ನು ತಿಳಿಸಿದರು. ಪರಿಸರ ಮಾಹಿತಿ ನೀಡಿದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ಎ.ಎಂ. ಜವರಯ್ಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಒಕ್ಕೂಟದ ಅಧ್ಯಕ್ಷ ಗಿರೀಶ್, ಸಂಘದ ಕೂಡ್ಲೂರು ಸೇವಾ ಪ್ರತಿನಿಧಿ ನಿರ್ಮಲ, ವಿಜಯನಗರ ಸೇವಾ ಪ್ರತಿನಿಧಿ ಸುನೀತ, ಎಸ್ಡಿಎಂಸಿ ಸದಸ್ಯೆ ಶೃತಿ, ಶಾಲೆಯ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ. ರಮ್ಯ, ಬಿ.ಎನ್. ಸುಜಾತ, ಅನ್ಸಿಲಾ ರೇಖಾ, ಎಸ್.ಎಂ. ಗೀತಾ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ವಿದ್ಯಾರ್ಥಿಗಳು, ಸಂಘದ ಸದಸ್ಯರು, ಧರ್ಮಸ್ಥಳ ಸಂಘದ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳು ಹಾಗೂ ಸಂಘದ ಸ್ವಯಂ ಸೇವಕರು ಅರಣ್ಯ ಮತ್ತು ಪರಿಸರ ಸಂರಕ್ಷಣೆಗಾಗಿ ತಮ್ಮನ್ನು ತೊಡಗಿಸಿಕೊಳ್ಳುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಇದೇ ವೇಳೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಂಘದ ಸದಸ್ಯರಿಗೆ ಸಸಿಗಳನ್ನು ವಿತರಿಸಲಾಯಿತು.
ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂಬAಧಿಸಿದAತೆ ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಪ್ರಚುರಪಡಿಸಿದರು. ಹಸಿರೇ ಉಸಿರು, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಕಾಡೇ ರಾಷ್ಟçದ ಸಂಪತ್ತು, ಮಳೆಗಾಗಿ ಅರಣ್ಯ, ನೀರಿಗಾಗಿ ಅರಣ್ಯ ಸಂರಕ್ಷಣೆ ಮುಂತಾದ ಘೋಷವಾಕ್ಯಗಳನ್ನು ವಿದ್ಯಾರ್ಥಿಗಳು ಪ್ರಚುರಪಡಿಸಿದರು.