ಮಡಿಕೇರಿ, ಆ. ೧೫: ಭಾರತ ಮಾತೆಗೆ ಜಯಘೋಷಗಳ ಅಭಿಷೇಕ, ನೃತ್ಯ ರೂಪಕ ಮೂಲಕ ಭಾರತಾಂಬೆಗೆ ನಮನ, ಆಕರ್ಷಕ ಪಥ ಸಂಚಲನ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ‘ಹಾರಲಿ ಬಾವುಟ, ಮುನ್ನಡೆಯಲಿ ಭಾರತ’ ಎಂಬ ಸಂದೇಶ..ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮಂಜಿನ ನಗರಿ ಮಡಿಕೇರಿಯಲ್ಲಿ ಸ್ವಾತಂತ್ರö್ಯ ದಿನಾಚರಣೆಯಂದು ದೇಶಾಭಿಮಾನದ ಕಹಳೆ ಮೊಳಗಿತು.
ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಬ್ರಿಟಿಷರ ದಾಸ್ಯದಿಂದ ಭಾರತ ಭೂಮಿ ಸ್ವಾತಂತ್ರö್ಯ ಪಡೆದ ದಿನವನ್ನು ಸ್ಮರಣೀಯಗೊಳಿಸಿದರು.
ಕೊಡಗು ಜಿಲ್ಲಾಡಳಿತ ವತಿಯಿಂದ ನಗರದ ಕೋಟೆ ಆವರಣದಲ್ಲಿ ೭೮ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೊö್ಯÃತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪಥಸಂಚಲನದ ಪರಿವೀಕ್ಷಣೆ ನಡೆಸಿ, ಗೌರವ ರಕ್ಷೆ ಸ್ವೀಕರಿಸಿ ಬಳಿಕ ಮಾತನಾಡಿದರು.
ಹೈನುಗಾರಿಕೆಗೆ ಪ್ರೋತ್ಸಾಹ ನೀಡಲು ಸಹಾಯಧನ
೨೦೨೪-೨೫ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ವಿವಿಧ ಬ್ಯಾಂಕ್ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗಳಿಗೆ ಗರಿಷ್ಠ ೬೫ ಸಾವಿರ ಸಾಲದ ಮೊತ್ತಕ್ಕೆ ಶೇ.೬ ರ ಬಡ್ಡಿ ಸಹಾಯಧನ ನೀಡಲಾಗುವುದು ಎಂದು ಭೋಸರಾಜು ಮಾಹಿತಿ ನೀಡಿದರು.
ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನು ಬಲಿದಾನಗೈದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಜವಾಬ್ದಾರಿ ನಮ್ಮದಾಗಿದೆ. ನಮ್ಮ ದೇಶದ ಐಕ್ಯತೆ, ಸಮಗ್ರತೆ, ಶಾಂತಿ ಸಂಸ್ಕೃತಿಗಳ ರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್. ತಿಮ್ಮಯ್ಯ ಭಾರತೀಯ ಸೇನಾ ಇತಿಹಾಸದಲ್ಲಿ ಎಂದಿಗೂ ಮರೆಯಲಾಗದ ರತ್ನಗಳು ಎಂದು ಬಣ್ಣಿಸಿದ ಅವರು, ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರ ಮನ ಗೆದ್ದಿದೆ. ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯು ಪ್ರಮುಖವಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದವರೆಗೆ ೬೪,೦೦,೩೮೯ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಒಟ್ಟು ೧,೧೦,೮೧೬ ಆದ್ಯತಾ ಪಡಿತರ ಚೀಟಿ ಕುಟುಂಬಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದು, ಹೆಚ್ಚುವರಿ ೫ ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ೩೪ ರೂ.ನಂತೆ ಪ್ರತಿ ಫಲಾನುಭವಿಗೆ ಮಾಹೆಗೆ ರೂ. ೧೭೦ ರÀಂತೆ ಡಿ.ಬಿ.ಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ನಗದನ್ನು ವರ್ಗಾವಣೆ ಮಾಡಲಾಗುತ್ತಿದೆ. ಅದರಂತೆ ಈವರೆಗೆ ಒಟ್ಟು ೫೮.೧೮ ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಮಹಿಳೆಗೆ ಪ್ರತೀ ತಿಂಗಳು ೨ ಸಾವಿರ ರೂ. ನೀಡುವ ‘ಗೃಹ ಲಕ್ಷಿö್ಮ’ ಯೋಜನೆಯು ಈಗಾಗಲೇ ಜಾರಿಗೆ ಬಂದಿದೆ. ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ೨೦೨೩ ರಿಂದ ಮೇ ೨೦೨೪ರ ಅಂತ್ಯದವರೆಗೆ ಒಟ್ಟು ೧,೧೫,೨೨೯ ಫಲಾನುಭವಿಗಳು ಹೆಸರು ನೋಂದಾಯಿಸಿಕೊAಡಿದ್ದು, ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗಿದೆ.೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದವರೆಗೆ ೧,೫೪,೫೭೪ ಮಂದಿ ಗೃಹಜ್ಯೋತಿ ಯೋಜನೆಯಡಿ ಹೆಸರು ನೋಂದಾಯಿಸಿದ್ದು, ಗೃಹಜ್ಯೋತಿಯ ಗ್ಯಾರಂಟಿಯ ವೆಚ್ಚ ರೂ ೬೬.೧೯ ಕೋಟಿ ರೂ.ಗಳನ್ನು ಸರ್ಕಾರವು ಭರಿಸಿದ್ದು, ಶೇ.೯೮.೬೯ ರಷ್ಟು ಪ್ರಗತಿ ಸಾಧಿಸಲಾಗಿದೆ. ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಈ ತನಕ ೧೧೬೨ ಮಂದಿ ಹೆಸರು ನೋಂದಣಿ ಮಾಡಿದ್ದು, ಈಗಾಗಲೇ ಜಿಲ್ಲೆಯಲ್ಲಿ ೮೯೨ ಮಂದಿಗೆ ಯುವನಿಧಿ ಯೋಜನೆ ತಲುಪುತ್ತಿದೆ ಎಂದು ವಿವರಿಸಿದರು.
ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಿಲ್ಲೆಯನ್ನು ‘ಮಾದಕ ವಸ್ತು ಮುಕ್ತ ಜಿಲ್ಲೆ’ಯನ್ನಾಗಿ ಮಾಡುವ ಸಲುವಾಗಿ ಪೊಲೀಸ್ ಇಲಾಖೆ ಪಣತೊಟ್ಟು ಕೈಗೊಂಡ ಕ್ರಮದ ಬಗ್ಗೆ ಸಚಿವ ಭೋಸರಾಜು ಶ್ಲಾಘನೆ ವ್ಯಕ್ತಪಡಿಸಿದರು.
೨೦೨೪ ನೇ ಸಾಲಿನಲ್ಲಿ ಈವರೆಗೆ ಒಟ್ಟು ೫೨ ಪ್ರಕರಣಗಳನ್ನು ದಾಖಲಿಸಿ, ೯೩ ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸುಮಾರು ರೂ. ೪,೫೬,೯೦೦ ಮೌಲ್ಯದ ೧೫.೨೬೫ ಕೆ.ಜಿ ಪ್ರಮಾಣದ ವಿವಿಧ ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ೨೦೨೩ ನೇ ಸಾಲಿನಲ್ಲಿ ೧೦೧ ಪ್ರಕರಣಗಳನ್ನು ದಾಖಲಾಗಿದ್ದು, ಅವುಗಳಲ್ಲಿ ೨೨ ಪ್ರಕರಣಗಳ ೨೫ ಜನ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಈ ಪೈಕಿ ೩ ಆರೋಪಿಗಳಿಗೆ ೧೦ ವರ್ಷಗಳ ಜೈಲು ಶಿಕ್ಷೆಯಾಗಿದೆ ಎಂದರು.
೨ ಹೊಸ ವಿದ್ಯಾರ್ಥಿ ನಿಲಯ, ೮ ಆಶ್ರಮ ಶಾಲೆಗಳ ಉನ್ನತೀಕರಣಕ್ಕೆ ಕ್ರಮ, ಆದಿವಾಸಿಗಳಿಗೆ ಪೌಷ್ಠಿಕ ಆಹಾರ ವಿತರಣೆ, ಸಂವಿಧಾನ ಜಾಗೃತಿಯಲ್ಲಿ ಕೊಡಗಿನ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಸಿಂಗ್ ಮೀನಾ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.