ವೀರಾಜಪೇಟೆ, ಆ. ೧೬: ಕಾವೇರಿ ಪದವಿಪೂರ್ವ ಕಾಲೇಜಿನ ತರಗತಿ ಪ್ರತಿನಿಧಿಗಳ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಚುನಾವಣೆ ಇತ್ತೀಚೆಗೆ ನಡೆಯಿತು. ಪ್ರತಿ ತರಗತಿಯಿಂದ ತಲಾ ಇಬ್ಬರು ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು. ನಂತರ ನಡೆದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಎಸ್., ಜಂಟಿ ಕಾರ್ಯದರ್ಶಿಗಳಾಗಿ ಕೃತಿಕ್ ರೋಷನ್ ವಿಭಾಗ ಹಾಗೂ ದೀಷ್ಮ ವಿ.ಎಸ್., ಕ್ರೀಡಾ ಕಾರ್ಯದರ್ಶಿಯಾಗಿ ನಾಣಯ್ಯ ಕೆ.ಎಸ್. ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅನನ್ಯ ಸಿ.ವಿ. ಆಯ್ಕೆಗೊಂಡರು.

ಪ್ರಾಂಶುಪಾಲರು ನಾಣಯ್ಯಾ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.