ಮಡಿಕೇರಿ, ಆ. ೧೬ : ಕೊಲ್ಕೊತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಗೈದ ಪ್ರಕರಣವನ್ನು ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಹಾಗೂ ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ೨೪ ಗಂಟೆಗಳ ಕಾಲ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಕೊಡಗು ಜಿಲ್ಲಾ ಘಟಕ ಕರೆ ನೀಡಿದೆ.

ತಾ. ೧೭ರ ಬೆಳಿಗ್ಗೆ ೬ ಗಂಟೆಯಿAದ ತಾ. ೧೮ರ ಬೆಳಿಗ್ಗೆ ೬ ಗಂಟೆಯ ತನಕ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸಲು ಈಗಾಗಲೇ ರಾಷ್ಟಿçÃಯ ಸಂಘಟನೆ ಸೂಚಿಸಿದೆ. ಅದರಂತೆ ಜಿಲ್ಲೆಯಲ್ಲೂ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡಿ ಆಡಳಿತದ ಗಮನ ಸೆಳೆಯುವ ಕೆಲಸ ಮಾಡಲಾಗುತ್ತಿದೆ. ಈ ಮುಷ್ಕರಕ್ಕೆ ಸರಕಾರಿ ವೈದ್ಯರು ಸಹಕಾರ ನೀಡುವಂತೆ ಕೋರಲಾಗಿದೆ ಎಂದು ಐಎಂಎ ಕೊಡಗು ಅಧ್ಯಕ್ಷ ಡಾ. ಶ್ಯಾಂ ಅಪ್ಪಣ್ಣ ‘ಶಕ್ತಿ’ಗೆ ತಿಳಿಸಿದ್ದಾರೆ.

ತುರ್ತು ಸೇವೆ ಹೊರತುಪಡಿಸಿ ವೈದ್ಯಕೀಯ ಲ್ಯಾಬ್‌ಗಳು, ಚಿಕಿತ್ಸಾ ಸೇವೆ, ಹೊರರೋಗಿಗಳ ವಿಭಾಗಗಳು ಸೇರಿದಂತೆ ಎಲ್ಲಾ ರೀತಿಯ ಖಾಸಗಿ ವಲಯದ ವೈದ್ಯಕೀಯ ಸೇವೆಯನ್ನು ೨೪ ಗಂಟೆಗಳ ಸ್ಥಗಿತಗೊಳಿಸಲಾಗುತ್ತದೆ. ವಿದ್ಯಾರ್ಥಿಯನ್ನು ಕೊಲೆಗೈದ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ವೈದ್ಯರ ಮೇಲೆ ಹಲ್ಲೆ, ಮಹಿಳಾ ವೈದ್ಯರ ಮೇಲೆ ಲೈಂಗಿಕ ಕಿರುಕುಳ ಘಟನೆಗಳು ಹೆಚ್ಚಾಗುತ್ತಿದ್ದು, ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಈ ಮೂಲಕ ಆಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆ ಕಾರ್ಯನಿರ್ವಹಣೆ

ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ) ಎಂದಿನAತೆ ಕಾರ್ಯನಿರ್ವಹಿಸಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ವಿಶಾಲ್ ಕುಮಾರ್ ತಿಳಿಸಿದ್ದಾರೆ.

ಖಾಸಗಿ ವಲಯ ಮುಷ್ಕರ ಕೈಗೊಂಡ ಸಂದರ್ಭ ಸರಕಾರಿ ವೈದ್ಯರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಈ ಹಿನ್ನೆಲೆ ಯಾವುದೇ ಬಂದ್‌ಗೂ ನಾವು ಮುಂದಾಗಿಲ್ಲ. ಸೇವೆ ಎಂದಿನAತೆ ಜಿಲ್ಲಾಸ್ಪತ್ರೆಯಲ್ಲಿ ದೊರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಡಿಹೆಚ್‌ಓ ಸ್ಪಷ್ಟನೆ

ಸರಕಾರಿ ಆಸ್ಪತ್ರೆಗಳ ವೈದ್ಯರು ಮುಷ್ಕರದಲ್ಲಿ ಭಾಗವಹಿಸುವ ಕುರಿತು ಯಾವುದೇ ಅಧಿಕೃತ ಆದೇಶ ನಮ್ಮ ವೈದ್ಯಕೀಯ ಸಂಘಟನೆಯಿAದ ಬಂದಿಲ್ಲ. ಹಾಗಾಗಿ ಜಿಲ್ಲೆಯ ೩೯ ಸರಕಾರಿ ಆರೋಗ್ಯ ಕೇಂದ್ರಗಳು ಎಂದಿನAತೆ ಸೇವೆ ಮುಂದುವರೆಸಲಿವೆೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.