‘ಏಕರೂಪ ನಾಗರಿಕ ಸಂಹಿತೆ', ‘ಒಂದು ರಾಷ್ಟç-ಒಂದು ಚುನಾವಣೆ'ಗೆ ಮೋದಿ ಕರೆ

ನವದೆಹಲಿ, ಆ. ೧೫: ರಾಷ್ಟç ರಾಜಧಾನಿ ದೆಹಲಿಯ ಕೆಂಪುಕೋಟೆಯ ಆವರಣದಿಂದ ೭೮ನೇ ಸ್ವಾತಂತ್ರ‍್ಯ ದಿನದಂದು ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ‘ಏಕರೂಪ ನಾಗರಿಕ ಸಂಹಿತೆ' ಜಾರಿಗೆ ಕರೆ ನೀಡಿದರು. ಇದು ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ಭಾಷಣ ಮತ್ತು ಅವರ ಸತತ ೧೧ನೇ ಸ್ವಾತಂತ್ರ‍್ಯ ದಿನದ ಭಾಷಣವಾಗಿತ್ತು. ಇಂದಿನ ಭಾಷಣದಲ್ಲಿ ‘ಒಂದು ರಾಷ್ಟç-ಒಂದು ಚುನಾವಣೆ' ಎಂಬ ಪರಿಕಲ್ಪನೆಯನ್ನು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು. ‘ಏಕರೂಪ ನಾಗರಿಕ ಸಂಹಿತೆ'ಯನ್ನು ಜಾರಿಗೆ ತರುವುದು ಮತ್ತು 'ತಾರತಮ್ಯದ ಕೋಮು ನಾಗರಿಕ ಸಂಹಿತೆ'ಯನ್ನು ತೊಡೆದುಹಾಕುವುದು ಅತ್ಯಗತ್ಯ ಎಂದು ಪ್ರಧಾನಿ ಹೇಳಿದರು. ಏಕರೂಪ ನಾಗರಿಕ ಸಂಹಿತೆಯ ಕುರಿತು ಸುಪ್ರೀಂ ಕೋರ್ಟ್ ಆಗಾಗ್ಗೆ ಚರ್ಚಿಸಿ ನಿರ್ದೇಶನಗಳನ್ನು ನೀಡಿದೆ. ಪ್ರಸ್ತುತ ನಾಗರಿಕ ಸಂಹಿತೆ ತಾರತಮ್ಯ ಮತ್ತು ಕೋಮುವಾದ ಎಂದು ಅನೇಕ ಜನರು ಭಾವಿಸುತ್ತಾರೆ. ಸಂವಿಧಾನ ರಚನೆಕಾರರ ಆಶಯಗಳನ್ನು ಪ್ರತಿಬಿಂಬಿಸುವ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನವನ್ನು ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎರಡೂ ಬೆಂಬಲಿಸುತ್ತಿದೆ ಎಂದು ಅವರು ತಿಳಿಸಿದರು. ಆದ್ದರಿಂದ, ಈ ಉದ್ದೇಶವನ್ನು ಈಡೇರಿಸುವ ಮಹತ್ವವಿದೆ ಎಂದರು.

ಗ್ಯಾರAಟಿಗಳಿAದ ‘ರಾಜ್ಯ ದಿವಾಳಿ' ಎಂದವರಿಗೆ ಉತ್ತರ ಸಿಕ್ಕಿದೆ: ಸಿದ್ದರಾಮಯ್ಯ

ಬೆಂಗಳೂರು, ಆ. ೧೫: ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತವೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನು ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ೭೮ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ‍್ಯ ಹೋರಾಟಗಾರರನ್ನು ಸ್ಮರಿಸಿದರು. ಸರ್ಕಾರದ ಗ್ಯಾರಂಟಿಗಳಿAದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ. ಸುಮಾರು ೪ ರಿಂದ ೫ ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಅನೇಕ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತಿದೆ. ಇದರಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನು ಸಾಧಿಸಿ ಉತ್ತರ ನೀಡುತ್ತೇವೆ ಎಂದು ಹೇಳಿದರು. ಇದೇ ವೇಳೆ ಕೇಂದ್ರ ಸರ್ಕಾರದ ತಾರತಮ್ಯ ವಿರುದ್ಧ ಮುಖ್ಯಮಂತ್ರಿಗಳು ಆಕ್ರೋಶದ ಭಾಷಣ ಮಾಡಿದರು. ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ. ಇವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಆದರೆ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದರು.

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್

ಬೆಂಗಳೂರು, ಆ. ೧೫: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕದನ ಕುತೂಹಲ ಮೂಡಿಸಿದ್ದು, ಚನ್ನಪಟ್ಟಣ ಬೈ ಎಲೆಕ್ಷನ್‌ಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಉಪ ಚುನಾವಣೆ ಎದುರಾಗಿದೆ. ಈ ಚುನಾವಣೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾಸನ, ಆ. ೧೫: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಗಂಡ-ಹೆAಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್ (೪೩), ಶ್ವೇತಾ (೩೬) ಹಾಗೂ ಅವರ ಮಗಳು ನಾಗಶ್ರೀ (೧೩) ಎಂದು ಗುರುತಿಸಲಾಗಿದೆ. ಮೃತ ಶ್ರೀನಿವಾಸ್ ಕಾರು ಚಾಲಕನಾಗಿದ್ದರು ಮತ್ತು ಅವರ ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಮೂವರು ಕಳೆದ ಮಂಗಳವಾರದಿAದ ಕಾಣಿಯಾಗಿದ್ದರು. ಕುಟುಂಬಸ್ಥರು ಇವರಿಗಾಗಿ ಎಲ್ಲೆಡೆ ಹುಡುಕಾಡಿದ್ದರಾದರೂ ಅವರು ಪತ್ತೆಯಾಗಿರಲಿಲ್ಲ. ನಂತರ ಈ ಸಂಬAಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಹುಡುಕಾಟ ನಡೆಸಿದಾಗ ನಿನ್ನೆ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಸ್ಮೀತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪತಿ ಹಾಗೂ ಪತ್ನಿಯ ಶವ ಪತ್ತೆಯಾಗಿದ್ದು, ಬಾಲಕಿ ನಾಗಶ್ರೀ ಮೃತದೇಹ ಇನ್ನೂ ಪತ್ತೆ ಆಗಿಲ್ಲ. ಹೀಗಾಗಿ ನಾಗಶ್ರೀ ದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಡಿಲು ಬಡಿದು ಮೂವರು ಹಾಕಿ ಆಟಗಾರರ ಸಾವು

ರಾಂಚಿ, ಆ. ೧೫: ರಾಜ್ಯದ ರಾಜಧಾನಿ ರಾಂಚಿಯಿAದ ಸುಮಾರು ೧೩೫ ಕಿ.ಮೀ. ದೂರದಲ್ಲಿರುವ ಸಿಮ್ಡೆಗಾದಲ್ಲಿ ಬುಧವಾರ ಸಂಜೆ ಸಿಡಿಲು ಬಡಿದು ಮೂವರು ಉದಯೋನ್ಮುಖ ಹಾಕಿ ಆಟಗಾರರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಕೊಲೆಬೀರ ಪೊಲೀಸ್ ಠಾಣಾ ವ್ಯಾಪ್ತಿಯ ತುಟಿಕಲ್ ಪಂಚಾಯತ್‌ನ ಝಾಪ್ಲಾದಲ್ಲಿ ಆಟಗಾರರು ಹಾಕಿ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಭಾರೀ ಮಳೆಯಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ಆಶ್ರಯ ಪಡೆದಿದ್ದ ಆಟಗಾರರಿಗೆ ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಎನೋಶ್, ಸೆನನ್ ಡ್ಯಾಂಗ್ ಮತ್ತು ನಿರ್ಮಲ್ ಹೋರೋ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕ್ಲೆಮೆಂಟ್ ಬಾಗೇ, ಜೈಲೇಶ್ ಬಾಗೇ, ಸಲೀಂ ಬಾಗೇ, ಪೀಟರ್ ಬಾಗೇ ಮತ್ತು ಪತಿರಾಮ್ ಬಾಗೇ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಕೋಳೇಬೀರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.