ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣೆ ಘೋಷಣೆ
ನವದೆಹಲಿ, ಆ. ೧೬: ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ ೧೮, ಸೆಪ್ಟೆಂಬರ್ ೨೫ ಮತ್ತು ಅಕ್ಟೋಬರ್ ೧ ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ. ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ನಾವು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣಕ್ಕೆ ಭೇಟಿ ನೀಡಿ, ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದೇವೆ. ಜನರಲ್ಲಿ ಹೆಚ್ಚಿನ ಉತ್ಸಾಹ ಕಂಡುಬAದಿದೆ. ಜನರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಬಯಸಿದ್ದಾರೆ. ೯೦ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ರಾಜೀವ್ ಕುಮಾರ್ ಅವರು ತಿಳಿಸಿದರು. ಇದೇ ವೇಳೆ ೯೦ ವಿಧಾನಸಭಾ ಕ್ಷೇತ್ರಗಳಿರುವ ಹರಿಯಾಣಕ್ಕೂ ಚುನಾವಣೆ ಘೋಷಿಸಿದ ರಾಜೀವ್ ಕುಮಾರ್ ಅವರು, ಅಕ್ಟೋಬರ್ ೧ ರಂದು ಹರಿಯಾಣದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್ ೪ ರಂದು ನಡೆಯಲಿದೆ ಎಂದರು. ಹರಿಯಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ ೧೨ ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ ೧೬ ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಕನ್ನಡ ಸಿನಿಮಾಗಳಿಗೆ ರಾಷ್ಟç ಪ್ರಶಸ್ತಿ ಗರಿ
ನವದೆಹಲಿ, ಆ. ೧೬: ೭೦ನೇ ರಾಷ್ಟಿçÃಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದು ಕೊಂಡಿ ದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ‘ಕಾಂತಾರ' ಪ್ರಶಸ್ತಿ ಬಾಚಿಕೊಂಡಿದೆ. ೨೦೨೨ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಘೋಷಿಸಿದೆ. ಅತ್ಯುತ್ತಮ ನಟರ ರೇಸ್ನಲ್ಲಿ ರಿಷಬ್ ಶೆಟ್ಟಿ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಗೆ ರಿಷಬ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ. ಯಶ್ ನಟನೆಯ ಕೆಜಿಎಫ್-೨ ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟç ಪ್ರಶಸ್ತಿ ಪಡೆದು ಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-೨ ಪ್ರಶಸ್ತಿ ಗೆದ್ದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ:ಅಂತಿಮ ಘಟ್ಟದಲ್ಲಿ ತನಿಖೆ
ಬೆಂಗಳೂರು, ಆ. ೧೬: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪೊಲೀಸ್ ತನಿಖೆ ಅಂತಿಮ ಘಟ್ಟ ತಲುಪಿದ್ದು, ಪ್ರಕರಣಕ್ಕೆ ಸಂಬAಧಿಸಿದ ಮೌಖಿಕ, ಸಾಂದರ್ಭಿಕ ಮತ್ತು ತಾಂತ್ರಿಕ ಸಾಕ್ಷö್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅಲ್ಲಿಂದ ತನಿಖೆಯ ಸುಮಾರು ಶೇ. ೭೦ ರಷ್ಟು ವರದಿಗಳು ತಮ್ಮ ಕೈ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾಜೆಟ್ ಅಥವಾ ಎಲೆಕ್ಟಾçನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್.ಎಸ್.ಎಲ್.ಗೆ. ಕಳಿಸಲಾಗಿದೆ. ಪ್ರಕರಣದ ಅಂತಿಮ ವರದಿ ಅಥವಾ ಚಾರ್ಜ್ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು. ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬAಧಿಸಿದAತೆ ದರ್ಶನ್ ಗ್ಯಾಂಗ್ನ ವಿರುದ್ಧ ಮೂರು ಮಾದರಿಯ ಸಾಕ್ಷö್ಯಗಳನ್ನು ಸಂಗ್ರಹ ಮಾಡಲಾಗಿದೆ ಎಂದರು.
ಎA.ವಿ.ಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಘೋಷಿಸಿದರು ಬೆಂಬಲ : ಉದ್ಧವ್ ಠಾಕ್ರೆ
ಮುಂಬೈ, ಆ. ೧೬: ಮಹಾ ವಿಕಾಸ್ ಅಘಾಡಿಯ (ಎಂ.ವಿ.ಎ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್ಸಿಪಿ(ಎಸ್ಪಿ) ಯಾವುದೇ ವ್ಯಕ್ತಿಯನ್ನು ಘೋಷಿಸಿದರೂ ಬೆಂಬಲಿಸುವುದಾಗಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶುಕ್ರವಾರ ಹೇಳಿದ್ದಾರೆ. ಇಂದು ವಿರೋಧ ಪಕ್ಷಗಳ ಮೈತ್ರಿಕೂಟ ಎಂವಿಎ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ವಿಧಾನಸಭೆ ಚುನಾವಣೆಯು ಮಹಾರಾಷ್ಟçದ ಸ್ವಾಭಿಮಾನವನ್ನು ಕಾಪಾಡುವ ಹೋರಾಟವಾಗಿದೆ. ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಮಹಾರಾಷ್ಟç ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದರು. ಎಂ.ವಿ.ಎ. ಸೇನಾ ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎಸ್ಪಿ) ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿದೆ. ಕಾಂಗ್ರೆಸ್ ಮತ್ತು ಎನ್ಸಿಪಿ(ಎಸ್ಪಿ) ಎಂವಿಎಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಯಾರನ್ನು ಘೋಷಿಸಿದರೂ ಬೆಂಬಲಿಸುತ್ತೇನೆ. ನಾನು ನನಗಾಗಿ ಹೋರಾಡುತ್ತಿಲ್ಲ. ಮಹಾರಾಷ್ಟçದ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇನೆ ಎಂದು ಠಾಕ್ರೆ ಹೇಳಿದರು.
ಶೇಖ್ ಹಸೀನಾ ವಿರುದ್ಧ ಮತ್ತೊಂದು ಕೊಲೆ ಪ್ರಕರಣ
ಢಾಕಾ, ಆ. ೧೬: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಮತ್ತೊಂದು ಕೊಲೆ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಶಿಕ್ಷಕರೊಬ್ಬರ ಹತ್ಯೆ ಪ್ರಕರಣ ಸಂಬAಧ ಈ ಪ್ರಕರಣವನ್ನು ದಾಖಲಿಸಲಾಗಿದೆ. ಆಗಸ್ಟ್ ೪ ರಂದು ಶಿಬ್ಗಂಜ್ ಉಪಜಿಲ್ಲಾದ ಪಾಲಿಕಂಡ ಗ್ರಾಮದ ನಿವಾಸಿ ಸಲೀಂ ಹುಸೇನ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಸಂಬAಧ ಹಸೀನಾ ಮತ್ತು ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾಡರ್ ವಿರುದ್ಧ ಬೋಗುರಾದ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಲ್ಲದೇ ಅವರ ಪಕ್ಷದ ೯೯ ಇತರ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ವಿರುದ್ಧವೂ ಮೊಕದ್ದಮೆ ಹೂಡಲಾಗಿದೆ.