ಸೋಮವಾರಪೇಟೆ, ಆ. ೧೬: ತಾಲೂಕು ಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ತುಳುನಾಡು ಬಿಲ್ಲವ ಮಹಿಳಾ ಸಂಘದ ಸಂಯುಕ್ತ ಆಶ್ರಯದಲ್ಲಿ ೯ನೇ ವರ್ಷದ ಆಟಿ ಸಂಭ್ರಮೋತ್ಸವ ೨೦೨೪ ತಾ. ೧೮ರಂದು (ನಾಳೆ) ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಂದ್ರಹಾಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೧ಕ್ಕೆ ಸ್ಥಳೀಯ ಜಾನಕಿ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಭಾಗವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಪಾಲ್ಗೊಳ್ಳಲಿದ್ದಾರೆ ಎಂದರು.

ಇದರೊAದಿಗೆ ಸೇವಾ ಸಮಿತಿ ಗೌರವಾಧ್ಯಕ್ಷ ಲಕ್ಷ್ಮಣ್ ಪೂಜಾರಿ, ಉದ್ಯಮಿಗಳಾದ ಬಿ.ಎಸ್. ಸುಂದರ್, ಬಿ.ಎಸ್. ಶ್ರೀಧರ್, ಕಾರ್ತಿಕ್ ಸದಾನಂದ್, ಮಂಜುನಾಥ್, ವಿ.ಎಂ. ವಿಜಯ, ತುಳುನಾಡು ಬಿಲ್ಲವ ಸಂಘದ ಅಧ್ಯಕ್ಷೆ ಬೇಬಿ ಚಂದ್ರಹಾಸ್, ಮಡಿಕೇರಿ ಸಂಘದ ಅಧ್ಯಕ್ಷೆ ಲೀಲಾವತಿ, ವೀರಾಜಪೇಟೆ ಸಂಘದ ಅಧ್ಯಕ್ಷ ಗಣೇಶ್, ಕುಶಾಲನಗರದ ಕೋಟಿ ಚನ್ನಯ್ಯ ಬಿಲ್ಲವ ಸಂಘದ ಅಧ್ಯಕ್ಷ ಸುಧೀರ್ ಸುಂಟಿಕೊಪ್ಪ ಬಿಲ್ಲವ ಸಂಘದ ಅಧ್ಯಕ್ಷ ಮಣಿ ಮುಖೇಶ್ ಉಪಸ್ಥಿತರಿರುವರು. ಇದೇ ಸಂದರ್ಭ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ರಾಷ್ಟ್ರ ಪ್ರಶಸ್ತಿ ವಿಜೇತ ಸಿ.ಎಸ್. ಸತೀಶ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಸಂಜೆ ೫ಕ್ಕೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬಿ.ಎಸ್. ಕಿರಣ್ ಶಿಲ್ಪ, ಬಿ.ಎಸ್. ಶಶಿಕುಮಾರ್, ಮಂಜುನಾಥ್, ತೇಜಸ್, ಮೋಹನ್, ಮೋಹನ್ ತಮ್ಮಯ್ಯ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಸಂಘದ ಗೌರವಾಧ್ಯಕ್ಷ ಬಿ.ಎ. ಭಾಸ್ಕರ್ ಮಾತನಾಡಿ, ಜನಾಂಗ ಬಾಂಧವರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಸಮಾಜ ಬಾಂಧವರಿಗೆ ಮನೋರಂಜನೆ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಕ್ಕಳು, ಬಾಲಕರು, ಬಾಲಕಿಯರು ಸೇರಿದಂತೆ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಪುರುಷರು ಮತ್ತು ಮಹಿಳೆಯರ ತಂಡಗಳಿಗೆ ಪ್ರತ್ಯೇಕವಾಗಿ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ. ಎಲ್ಲ ಸ್ಪರ್ಧೆಗಳು ಬೆಳಿಗ್ಗೆ ೮ಕ್ಕೆ ಆರಂಭಗೊಳ್ಳಲಿದ್ದು, ಭಾಗವಹಿಸುವವರು ಮೊದಲೇ ನೋಂದಣಿ ಮಾಡಿಸಿಕೊಳ್ಳಬೇಕೆಂದರು.

ಸಮಾಜ ಬಾಂಧವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾನಿಧಿ ನೀಡಲಾಗುವುದು. ೨೦೨೩-೨೪ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯೊAದಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರು. ಹೆಚ್ಚಿನ ಮಾಹಿತಿಗಾಗಿ ೯೭೪೦೩೦೯೮೭೯ ಅಥವಾ ೯೦೦೮೫೬೫೪೫೮ ಸಂಪರ್ಕಿಸಲು ಮನವಿ ಮಾಡಿದರು. ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಂ. ಇಂದಿರಾ ಮೋಣಪ್ಪ, ಖಜಾಂಚಿ ಬಿ.ಸಿ. ರಮೇಶ್ ಪೂಜಾರಿ, ನಿರ್ದೇಶಕ ಜಿ. ಗಣೇಶ್ ಉಪಸ್ಥಿತರಿದ್ದರು.