ಚೆಯ್ಯಂಡಾಣೆ, ಆ. ೧೬: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ಜೀಪ್ ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು ಮಡಿಕೇರಿ ಮುಖ್ಯರಸ್ತೆಯ ಪಾಲೂರು ಗ್ರಾಮದಲ್ಲಿ ನಡೆದಿದೆ.

ನಾಪೋಕ್ಲುವಿನಿಂದ ಮಡಿಕೇರಿ ಕಡೆಗೆ ಕಕ್ಕಬ್ಬೆ ಗ್ರಾಮದ ರವಿಕುಮಾರ್ ಎಂಬವರು ಚಾಲಿಸುತ್ತಿದ್ದ ಬೊಲೆರೋ ಜೀಪ್ ಪಾಲೂರು ಗ್ರಾಮದ ರಸ್ತೆಯ ಇಳಿಜಾರಿನಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಿಂದ ಬೊಲೆರೋ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ರವಿ ಕುಮಾರ್ ಸಣ್ಣಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ಧಾವಿಸಿದ ನಾಪೋಕ್ಲು ಪೊಲೀಸರು ಸಾರ್ವಜನಿಕರ ಸಹಕಾರದಿಂದ ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.