ಮಡಿಕೇರಿ, ಆ. ೧೬: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ಹೆಸರಿನಲ್ಲಿ ಶನಿವಾರಸಂತೆ ಹೋಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವನದ ಕಾಮಗಾರಿ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಆಡಳಿತ ವ್ಯವಸ್ಥೆಯ ನಿರ್ಲಕ್ಷö್ಯದ ವಿರುದ್ಧ ಹೋರಾಟ ನಡೆಸಲು ದಲಿತ ಸಂಘಟನೆಗಳು ನಿರ್ಧರಿಸಿವೆ. ಡಾ. ಅಂಬೇಡ್ಕರ್ ಭವನದ ನಿರ್ಲಕ್ಷö್ಯದ ಕುರಿತು ಶನಿವಾರಸಂತೆಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಮುಖಂಡರು ಅಪೂರ್ಣಗೊಂಡಿರುವ ಭವನ ಪಾಳುಬಿದ್ದಿದ್ದು, ಇದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಡಾ. ಅಂಬೇಡ್ಕರ್ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ನಿರಂತರ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟ ಪ್ರಮುಖರು, ಮೊದಲು ಸಂಬAಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಲು ನಿರ್ಣಯ ಕೈಗೊಂಡರು.
ಡಾ. ಅಂಬೇಡ್ಕರ್ ಭವನ ಸಮಿತಿಯ ಉಪಾಧ್ಯಕ್ಷ ವಿ. ಸಂದೀಪ್, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಶಿವಕುಮಾರ್, ಲೋಕೇಶ್, ದೇವರಾಜ್, ಸೋಮೇಶ್, ರಾಮಯ್ಯ, ಧರ್ಮ, ವೆಂಕಟಯ್ಯ, ಶಿವಣ್ಣ, ಕುಶಾಲ್, ಪ್ರದೀಪ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು.