ಮಡಿಕೇರಿ, ಆ. ೧೫: ಡ್ರಾಪ್ ಕೊಡುವ ನೆಪವೊಡ್ಡಿ ಕೊಡಗಿನ ನಿವಾಸಿಯೊಬ್ಬರನ್ನು ಕಾರಿಗೆ ಹತ್ತಿಸಿಕೊಂಡು ಕೆಲ ದೂರ ಸಾಗಿ ಅವರ ಮೇಲೆ ಹಲ್ಲೆ ನಡೆಸಿ ಅವರ ಬಳಿಯಿದ್ದ ಚಿನ್ನ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ವೀರಾಜಪೇಟೆ ನಿವಾಸಿಯಾಗಿರುವ ಎಂ. ಗಂಗಾಧರ ನಗದು ಕಳೆದುಕೊಂಡ ವ್ಯಕ್ತಿ. ಇವರು ವೀರಾಜಪೇಟೆಯಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದು, ಕಳೆದ ಶುಕ್ರವಾರ ವೀರಾಜಪೇಟೆಯಿಂದ ಬಿಸಿ ರೋಡ್ಗೆ ರಾತ್ರಿ ಸುಮಾರು ೯ ಗಂಟೆಯ ವೇಳೆಗೆ ಬಂದಿಳಿದಿದ್ದರು. ಬಂಟ್ವಾಳದ ನರಿಕೊಂಬಿನಲ್ಲಿರುವ ಅಣ್ಣನ ಮನೆಗೆ ತೆರಳಲು ಬಿ.ಸಿ.ರೋಡ್ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು. ಆಗ ಅದೇ ದಾರಿಯಲ್ಲಿ ಅಪರಿಚಿತ ಕಾರೊಂದು ಬಂದಿದ್ದು ನಿಂತಿದ್ದ ಗಂಗಾಧರ ಅವರ ಬಳಿ ಯಾವ ಕಡೆ ಹೋಗಬೇಕಿದೆ ಎಂದು ಪ್ರಶ್ನಿಸಿದ್ದಾರೆ. ಆಗ ನರಿಕೊಂಬಿಗೆ ಹೋಗಬೇಕು ಎಂದಿದ್ದಕ್ಕೆ ನಾವು ಕೂಡ ಅದೇ ಮಾರ್ಗವಾಗಿ ಹೋಗುತ್ತಿದ್ದು, ನಿಮ್ಮನ್ನು ಡ್ರಾಪ್ ಮಾಡುತ್ತೇವೆ ಎಂದು ಹೇಳಿ ಗಂಗಾಧರ ಅವರನ್ನು ಕಾರಿಗೆ ಹತ್ತಿಸಿಕೊಂಡಿದ್ದಾರೆ.
ಕಾರು ಕೆಲ ದೂರ ತೆರಳುತ್ತಿದ್ದಂತೆ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ ಇಬ್ಬರು ವ್ಯಕ್ತಿಗಳು ಗಂಗಾಧರ ಅವರ ಮೇಲೆ ಹಲ್ಲೆ ನಡೆಸಿ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಬಳಿಕ ಅವರ ಬಳಿಯಿದ್ದ ೮೦ ಸಾವಿರ ರೂ. ಮೌಲ್ಯದ ಚಿನ್ನದ ಸರ ಮತ್ತು ೨ ಸಾವಿರ ರೂ. ನಗದು ಹಣವನ್ನು ಕಸಿದುಕೊಂಡು ಬಳಿಕ ಅವರನ್ನು ಕಾರಿನಿಂದ ಹೊರದೂಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ಗಂಗಾಧರ ಹೇಗೋ ಅಲ್ಲಿದ್ದ ಸಾರ್ವಜನಿಕರ ಸಹಾಯದಿಂದ ಸಹೋದರನಿಗೆ ಕರೆಮಾಡಿ ವಿಚಾರ ತಿಳಿಸಿ ನಂತರ ಗಾಯಕ್ಕೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬAಧಿಸಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಂಟ್ವಾಳ ಪೊಲೀಸ್ ಇನ್ಸ್ಪೆಕ್ಟರ್ ಅನಂತ್ ಈ ಸಂಬAಧ ನಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ. ದೂರಿನ ಪ್ರಕಾರ ಘಟನೆಯು ೯ ರಿಂದ ೧೦ ಗಂಟೆಗೆ ನಡೆದಿದೆ. ಆದರೆ ಆ ದಿನ ಆ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳಲ್ಲಿ ಮಾಹಿತಿ ಲಭ್ಯವಾಗಿಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
-ಕೋವರ್ಕೊಲ್ಲಿ ಇಂದ್ರೇಶ್