ಕೂಡಿಗೆ, ಆ. ೧೭ : ಕೂಡಿಗೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ತಾ. ೧೮ರಂದು (ಇಂದು) ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ. ಮಹಾಸಭೆಯ ಅಧ್ಯಕ್ಷತೆಯನ್ನು ಭಾರತಿ ಕೃಷ್ಣ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ಒಕ್ಕೂಟದ ವಿಸ್ತಾರಣಾಧಿಕಾರಿ ಬಿ.ವಿ. ವೀಣಾ ಭಾಗವಹಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಸಿ. ಲಕ್ಷಿö್ಮ ತಿಳಿಸಿದ್ದಾರೆ.