ಬೆಂಗಳೂರು, ಆ. ೧೭ : ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಮೈಸೂರಿನ ಮುಡಾ ವತಿಯಿಂದ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಲಾದ ಬದಲೀ ನಿವೇಶನ ಸಂಬAಧ ತನಿಖೆಗೆ ರಾಜ್ಯಪಾಲರು ಅವಕಾಶ ಕಲ್ಪಿಸಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮೂವರು ಕಾರ್ಯಕರ್ತರಿಂದ ದೂರುಗಳನ್ನು ಸ್ವೀಕರಿಸಿದ್ದಾರೆ, ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಮೊದಲು ನೀಡಿದ ದೂರಿಗೆ ಪೂರಕವಾಗಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹಾಗೂ ಮತ್ತೊಬ್ಬರು ಪ್ರದೀಪ್ ಕುಮಾರ್ ಎಸ್. ಪಿ . ಎಂಬವರುಗಳೂ ಇತ್ತೀಚೆಗೆ ರಾಜ್ಯಪಾಲರಿಗೆೆ ದೂರನ್ನು ಸಲ್ಲಿಸಿದ್ದರು. ಭ್ರಷ್ಟಾಚಾರ ತಡೆ ಕಾಯಿದೆ, ಭಾರತೀಯ ನ್ಯಾಯ ಸಂಹಿತೆ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳಡಿ ಕ್ರಮ ಕೈಗೊಳ್ಳಲು ರಾಜ್ಯಪಾಲರು ಅನುಮತಿಯಿತ್ತಿದ್ದಾರೆ. ಸಿದ್ದರಾಮಯ್ಯನವರು ಎಷ್ಟೇ ಸಮರ್ಥಿಸಿಕೊಂಡರೂ, ಕಾನೂನುಬದ್ಧವಾಗಿಯೇ ನಿವೇಶನ ಪಡೆದಿರುವುದಾಗಿ ಎಂದು ಹೇಳಿದರೂ ಕೂಡ ಮುಡಾದಿಂದ ಅವರ ಪತ್ನಿಗೆ ಹಂಚಿಕೆಯಾದ ನಿವೇಶನಗಳಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ರಾತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಅವರ ಜೊತೆ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಚರ್ಚಿಸಿದ್ದರು. ಮುಂದಿನ ಕಾನೂನು ಹೋರಾಟದ ಕುರಿತು ಪೊನ್ನಣ್ಣ ಜೊತೆ ಮಾತನಾಡಿದ್ದರು. ಇದೀಗ ಕಾನೂನು ಹೋರಾಟಕ್ಕೆ ಅವರು ಮುಂದಾಗಿದ್ದಾರೆ.

ಅಬ್ರಹಾAಗೆ ಕರೆ : ಅತ್ತ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಇತ್ತ ರಾಜ್ಯಪಾಲರ ಕಚೇರಿಯಿಂದ ಅಬ್ರಹಾಂಗೆ ಕರೆ ಹೋಗಿದ್ದು, ಅಬ್ರಹಾಂ ಅವರು ಆಗ ಮಡಿಕೇರಿಯಲ್ಲ್ಲಿದ್ದರು. ಕಾಸರಗೋಡಿಗೆ ತೆರಳಿದ್ದ ಅವರು ಮರಳಿ ಬೆಂಗಳೂರಿಗೆ ಮಡಿಕೇರಿ ಮೂಲಕ ವಾಪಸಾದರು. ತಾನು ರಾಜ್ಯಪಾರ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿದ ಅವರು ಕಾನೂನಾತ್ಮಕ ಹೋರಾಟ ಮುಂದುವರಿಯಲಿರುವುದಾಗಿ ಖಚಿತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರಿನ ಪ್ರಮುಖ ಪ್ರದೇಶದಲ್ಲಿ ಮುಡಾ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಹೋಲಿಸಿದರೆ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿರುವ ಪರಿಹಾರದ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದು ಆರೋಪವಾಗಿದೆ.

ಅಭದ್ರಗೊಳಿಸುವ ಷಡ್ಯಂತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

(ಮೊದಲ ಪುಟದಿಂದ) ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ತನ್ನ ವಿರುದ್ಧ ರಾಜ್ಯಪಾಲರು ಕಾನೂನು ಕ್ರಮಕ್ಕೆ ಅನುಮತಿ ನೀಡಿರುವುದಕ್ಕೆ ಸಂಬAಧಿಸಿದAತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೇಲ್ನೋಟಕ್ಕೆ ತÀನ್ನ ಮೇಲೆ ಯಾವುದೇ ಪ್ರಕರಣವಿಲ್ಲ. ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದರು.

ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ

ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ತÀನ್ನ ಪರವಾಗಿದ್ದಾರೆ. ಬಿಜೆಪಿಯವರಿಗೆ ತÀನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ. ಬಿಜೆಪಿಯವರ ಈ ನಿಲುವಿಗೆ ಈಗ ಜೆಡಿಎಸ್‌ನವರೂ ಬೆಂಬಲ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು. ಹಗರಣಕ್ಕೆ ಸಂಬAಧಿಸಿದAತೆ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಿAದ ಮೈಸೂರಿನವರೆಗೆ ಒಂದು ವಾರದ 'ಪಾದಯಾತ್ರೆ' ನಡೆಸಿದ್ದವು.

ಸಿಎಂ ಜೊತೆ ನಾವಿದ್ದೇವೆ : ಡಿಸಿಎಂ ಶಿವಕುಮಾರ್

ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡುತ್ತಿದ್ದಾರೆ. ರಾಜಕಾರಣ ಮಾಡುತ್ತಿದ್ದಾರೆ. ಜೋಶಿ, ಕುಮಾರಸ್ವಾಮಿ ಈ ಸರ್ಕಾರ ಬೀಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಪೂರ್ವಾನುಮತಿ ನೀಡಲಾಗಿದೆ. ಇಡೀ ಸಂಪುಟ ಸಚಿವರು ಸಿಎಂ ಬೆನ್ನಿಗೆ ನಿಂತಿದೆ. ಪಕ್ಷವೂ ಸಿಎಂ ಬೆನ್ನಿಗೆ ನಿಂತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿAದು ೧೦ ಸಚಿವರೊಂದಿಗೆ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದರು. ಈ ವೇಳೆ ಮಾತನಾಡಿದ ಅವರು, ಇದು ಕೇವಲ ರಾಜಕೀಯ ಪಿತೂರಿ, ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ, ಅವರ ಜೊತೆ ನಾವಿದ್ದೇವೆ, ಕಾನೂನು ಹೋರಾಟ ಮೂಲಕ ಎದುರಿಸುತ್ತೇವೆ ಎಂದರು.