ಮಡಿಕೇರಿ, ಆ. ೧೭: ಪಶ್ಚಿಮ ಬಂಗಾಳದ ಕೊಲ್ಕೊತ್ತದ ಆಸ್ಪತ್ರೆಯೊಂದರ ವೈದ್ಯೆಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಪ್ರಕರಣವನ್ನು ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರೊಂದಿಗೆ ಕರ್ತವ್ಯ ದಲ್ಲಿರುವ ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿ ಜಿಲ್ಲೆಯಲ್ಲಿಂದು ವೈದ್ಯರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಕೇಂದ್ರ ಮಡಿಕೇರಿಯ ಜಿಲ್ಲಾಸ್ಪತ್ರೆಯಿಂದ ಮೆರವಣಿಗೆ ಮೂಲಕ ಸಾಗಿದ ವೈದ್ಯರು ಹಾಗೂ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಂತ್ರಸ್ತೆ ವೈದ್ಯೆಗೆ ಸೂಕ್ತ ನ್ಯಾಯ ಒದಗಿಸುವುದರೊಂದಿಗೆ ದಿನದ ೨೪ ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿದರು.

ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್‌ರಾಜ ಅವರ ಮೂಲಕ ಕೇಂದ್ರ ಆರೋಗ್ಯ ಸಚಿವರಿಗೆ ರವಾನಿಸಿದರು. ತುರ್ತು ಚಿಕಿತ್ಸೆ ಹೊರತುಪಡಿಸಿ ಇತರ ವೈದ್ಯಕೀಯ ಸೇವೆಗಳು ಸ್ಥಗಿತಗೊಂಡಿದ್ದವು.

(ಮೊದಲ ಪುಟದಿಂದ) ನಿಮಾ ಸಂಸ್ಥೆಯ ಆಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬೋಧಕ ಆಸ್ಪತ್ರೆಯ ವಿದ್ಯಾರ್ಥಿ ನಾಯಕ ಎಂ. ಪೂರ್ಣಚಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಐಎಂಎ ಅಧ್ಯಕ್ಷ ಡಾ. ಶ್ಯಾಂ ಅಪ್ಪಣ್ಣ, ಕಾರ್ಯದರ್ಶಿ ಡಾ. ಸಿ.ಆರ್. ಪ್ರಶಾಂತ್, ಮಾಜಿ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ, ಡಾ. ರವಿಚಂದ್ರ, ಡಾ. ರಾಜಾರಾಂ, ಡಾ. ಕುಲಕರ್ಣಿ, ಡಾ. ಚಿಣ್ಣಪ್ಪ, ಡಾ. ಯಶೋಧರ ಪೂಜಾರಿ, ಡಾ. ಸುಭಾಶ್ ನಾಣಯ್ಯ, ಡಾ. ರೇಣುಕಾ ಸುಧಾಕರ್, ಡಾ. ಕುಶ್ವಂತ್ ಕೋಳಿಬೈಲು, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸತೀಶ್, ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಪದಾಧಿಕಾರಿಗಳಾದ ನಿಶಾ, ದೀನಾ ಸೇರಿದಂತೆ ಇತರ ವೈದ್ಯರುಗಳು, ೨೦೦ಕ್ಕೂ ಅಧಿಕ ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳಲ್ಲಿ ವ್ಯತ್ಯಯಗೊಂಡು ರೋಗಿಗಳು ಪರದಾಡುವಂತಾಯಿತು. ಆದರೆ, ಶುಶ್ರೂಶಕಿಯರು, ಸಿಬ್ಬಂದಿಗಳು ರೋಗಿಗಳಿಗೆ ಸಹಕರಿಸುವಲ್ಲಿ ನೆರವಾದರು. ಹೆಬ್ಬಾಲೆ: ಹೆಬ್ಬಾಲೆ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾಕ್ಟರ್ ಸಾನಿಯಾ, ಆರೋಗ್ಯ ನಿರೀಕ್ಷಣಾಧಿಕಾರಿ ಸಂಜಯ್, ನರ್ಸಿಂಗ್ ಅಧಿಕಾರಿ ಶೀಲಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ ಹಾಗೂ ಸಿಬ್ಬಂದಿ ಬೆಂಬಲ ವ್ಯಕ್ತಪಡಿಸಿದರು.ವೀರಾಜಪೇಟೆ : ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮುಷ್ಕರದ ಬಗ್ಗೆ ಮಾತನಾಡಿದ ಮುಖ್ಯ ಶಸ್ತçಚಿಕಿತ್ಸಕ ವಿಶ್ವನಾಥ ಸಿಂಪಿ ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ವೈದ್ಯರಾದ ಗಿರಿಧರ್, ಪ್ರಜ್ವಲ್ ಕುಮಾರ್ ಹಾಜರಿದ್ದರು.

ಸೋಮವಾರಪೇಟೆ: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಆರ್ ಜಿಆರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೆöÊನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಹತ್ಯೆ ಹಾಗೂ ಆಸ್ಪತ್ರೆ ಮೇಲೆ ದುಷ್ಕರ್ಮಿಗಳ ಧಾಳಿಯನ್ನ ಖಂಡಿಸಿ ರಾಷ್ಟçವ್ಯಾಪಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡಲು ಭಾರತೀಯ ವೈದ್ಯಕೀಯ ಸಂಘ ನೀಡಿದ್ದ ಕರೆಗೆ ಸೋಮವಾರಪೇಟೆಯಲ್ಲೂ ಬೆಂಬಲ ವ್ಯಕ್ತವಾಯಿತು.

ಆದರೆ ಆಸ್ಪತ್ರೆಯ ವೈದ್ಯಕೀಯ ಸೇವೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಿದ್ದು, ವೈದ್ಯರುಗಳು ಹಾಗೂ ಸಿಬ್ಬಂದಿಗಳು ಕೈಗೆ ಕಪ್ಪುಪಟ್ಟಿ ಧರಿಸಿ ರೋಗಿಗಳಿಗೆ ಚಿಕಿತ್ಸೆ ನೀಡಿದರು. ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಲ್ಲಿಯೂ ಎಂದಿನAತೆ ಚಿಕಿತ್ಸೆ ನಡೆಯಿತು.ಕುಶಾಲನಗರ: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳು ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಯಿತು.

ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳರೋಗಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಸ್ಥಗಿತಗೊಂಡಿದ್ದವು. ತುರ್ತು ಸೇವೆಗಳಲ್ಲಿ ಮಾತ್ರ ವೈದ್ಯರು, ಸಿಬ್ಬಂದಿ ತಮ್ಮನ್ನು ತೊಡಗಿಸಿಕೊಂಡರು. ಕುಶಾಲನಗರ ಪಟ್ಟಣದಲ್ಲಿ ಇನ್ನರ್ ವೀಲ್ ಸಂಸ್ಥೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಯಿತು.

ನೂರಕ್ಕೂ ಅಧಿಕ ಮಂದಿ ಸೇರಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಘೋಷಣೆ ಕೂಗಿದರು. ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಚಿತ್ರ ರಮೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕುಶಾಲನಗರ ವಿವಿಧ ಮಹಿಳಾ ಸಂಘಟನೆಗಳು ಐಎಂಎ ಸದಸ್ಯರು, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಮುಳ್ಳೂರು: ಕೊಡಗು ಜಿಲ್ಲೆಯ ವೈದ್ಯರ ಸಂಘಟನೆ ನೇತೃತ್ವದಲ್ಲಿ ಪ್ರಕರಣವನ್ನು ವಿರೋಧಿಸಿ ಶನಿವಾರ ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆ ವರೆಗೂ ಖಾಸಗಿ, ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಕ್ಲಿನಿಕ್‌ಗಳ ವೈದ್ಯರು ಆಸ್ಪತ್ರೆ, ಕ್ಲಿನಿಕ್ ಬಂದ್‌ಗೊಳಿಸಿ ಸೇವೆ ನೀಡದೆ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

ಶನಿವಾರಸAತೆ ಸೇರಿದಂತೆ ಇತರ ಕಡೆಯ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಆದರೆ ಆಸ್ಪತ್ರೆ ದಾದಿಯರು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಕೈತೋಳಿಗೆ ಕಪ್ಪುಪಟ್ಟಿ ಧರಿಸಿ ಹೊರ ರೋಗಿಗಳಿಗೆ ಎಂದಿನAತೆ ಸೇವೆ ನೀಡುತ್ತಿದ್ದುದು ಕಂಡು ಬಂದಿತು.

ಶನಿವಾರಸಂತೆ ಸಮೂದಾಯ ಆರೋಗ್ಯ ಕೇಂದ್ರದ ವೈದ್ಯರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಆಸ್ಪತ್ರೆ ಮುಂಭಾಗದ ಬಾಗಿಲನ್ನು ಮಾತ್ರ ಬಂದ್‌ಗೊಳಿಸಲಾಗಿತ್ತು. ಆಸ್ಪತ್ರೆಯ ದಾದಿಯರು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಕೈ ತೋಳಿಗೆ ಕಪ್ಪುಪಟ್ಟಿ ಧರಿಸಿ ಆಸ್ಪತ್ರೆಗೆ ಬಂದ ಹೊರ ರೋಗಿಗಳಿಗೆ ಎಂದಿನAತೆ ಚಿಕಿತ್ಸೆ ನೀಡುತ್ತಿದ್ದರು. ಪ್ರಕರಣ ವಿರೋಧಿಸಿ ಕಪ್ಪುಪಟ್ಟಿದ ಧರಿಸಿದ ಆಸ್ಪತ್ರೆ ಸಿಬ್ಬಂದಿಗಳು ಹೊರ ಬಂದು ಆಸ್ಪತ್ರೆ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಿದ ಬಳಿಕ ಹೊರ ರೋಗಿಗಳಿಗೆ ಚಿಕಿತ್ಸೆ ನಿಡುವ ಮೂಲಕ ಮಾನವಿಯತೆ ಮೆರೆದರು. ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಸ್ಪತ್ರೆ ವೈದ್ಯಾಧಿಕಾರಿ ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆಗೆ ಬೆಂಬಲ ಸೂಚಿಸಿದರು, ಆಸ್ಪತ್ರೆಯ ದಾದಿಯರು ಕರ್ತವ್ಯಕ್ಕೆ ಹಾಜರಾಗಿ ಹೊರ ರೋಗಿಗಳಿಗೆ ಎಂದಿನAತೆ ಸೇವೆ ನೀಡುತ್ತಿದ್ದರು. ಪ್ರಕರಣಕ್ಕೆ ಸಂಬAಧ ಪಟ್ಟಂತೆ ಆಸ್ಪತ್ರೆ ಸಿಬ್ಬಂದಿ ನೈತಿಕ ಬೆಂಬಲ ವ್ಯಕ್ತಪಡಿಸಿದರು.

ಶನಿವಾರಸಂತೆ ಪಟ್ಟಣದ ಕೆಲವು ಖಾಸಗಿ ಕ್ಲಿನಿಕ್‌ನ ವೈದ್ಯರು ಕ್ಲಿನಿಕ್ ಬಾಗಿಲು ಬಂದ್‌ಗೊಳಿಸಿದ್ದರೆ ಮತ್ತೆ ಕೆಲವು ಕ್ಲಿನಿಕ್‌ನ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಮೂಲಕ ನೈತಿಕ ಬೆಂಬಲ ವ್ಯಕ್ತ ಪಡಿಸಿದ್ದು ಕಂಡು ಬಂದಿತು.