ವೀರಾಜಪೇಟೆ, ೧೮: ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಹೋತ್ಸವ ವೀರಾಂಜನೇಯ ದೇಗುಲದಲ್ಲಿ ತಾ. ೨೧ ರಂದು ನಡೆಯಲಿದೆ.
ಇಲ್ಲಿನ ಚಿಕ್ಕಪೇಟೆ ಛತ್ರಕೆರೆಯ ಬಳಿಯ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ತಾ.೨೧ ರಂದು ಶ್ರೀ ರಾಘವೇಂದ್ರ ಸ್ವಾಮಿಗಳ ೩೪೯ನೇ ಆರಾಧನಾ ಮಹೋತ್ಸವ ನಡೆಯಲಿದೆ. ಅಂದು ಶ್ರೀ ಸ್ವಾಮಿಗೆ ಬೆಳಿಗ್ಗೆ ವಿಶೇಷ ಅಭಿಷೇಕ ಪೂಜೆ, ಅಲಂಕಾರ ಪೂಜೆ, ಮಾಹಾಪೂಜೆ, ಭಜನೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.