ಮಡಿಕೇರಿ, ಆ. ೧೮: ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಆ. ೧೯ರಂದು ಬೆಳಿಗ್ಗೆ ೧೦.೩೦ಕ್ಕೆ ವಿಶ್ವ ಛಾಯಾಗ್ರಹಣ ದಿನಾಚರಣೆ ನಡೆಯಲಿದೆ.

ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರಾದ ಅನಿಲ್ ಎಚ್.ಟಿ. ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಡಿಕೇರಿಯ ಛಾಯಾಗ್ರಾಹಕ ಹರ್ಷಿತ್ ಭಾಗವಹಿಸಲಿದ್ದು, ‘ಛಾಯಾಗ್ರಹಣದಲ್ಲಿ ಆಧುನಿಕ ತಂತ್ರಜ್ಞಾನ’ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಸುಂಟಿಕೊಪ್ಪ ಯೂತ್ ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಅನೂಪ್ ಕುಮಾರ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ಸಿ. ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವ ಛಾಯಾಗ್ರಹಣ ದಿನ ಅಂಗವಾಗಿ ಪತ್ರಕರ್ತ ವಿಘ್ನೇಶ್ ಭೂತನಕಾಡು ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.