ಮಡಿಕೇರಿ, ಆ. ೧೮: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ತಾ.೨೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಶಾಸಕರಾದ ಡಾ.ಮಂತರ್‌ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.