ಚೆಯ್ಯಂಡಾಣೆ, ಆ. ೧೭: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ಆಯೋಜಿಸಲಾಗಿದೆ. ತಾ: ೧೯ ರಿಂದ ೨೩ ರವರೆಗೆ ಕ್ರೀಡಾಕೂಟ ನಡೆಯಲಿದ್ದು ನಾಪೋಕ್ಲು ವಲಯದ ೧೩ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ತಾ: ೨೦ ರಂದು ಪೂರ್ವಾಹ್ನ ೧೦ ಗಂಟೆಗೆ ಕ್ರೀಡಾಕೂಟವನ್ನು ಉದ್ಘಾಟನಾ ಸಮಾರಂಭವನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಉದ್ಘಾಟಿಸಲಿದ್ದಾರೆ.