ಸೋಮವಾರಪೇಟೆ, ಆ. ೧೭: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘವು ಸಮುದಾಯದ ಸಂಘಟನೆಯೊAದಿಗೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಕೊಡಗಿನಲ್ಲಿಯೂ ಚಟುವಟಿಕೆಗಳು ಆರಂಭಗೊಳ್ಳಲಿವೆ ಎಂದು ಸಂಘದ ರಾಜ್ಯಾಧ್ಯಕ್ಷ ಹಾಗೂ ಶ್ರವಣಬೆಳಗೊಳ ಕ್ಷೇತ್ರದ ಶಾಸಕರೂ ಆಗಿರುವ ಸಿ.ಎನ್. ಬಾಲಕೃಷ್ಣ ಹೇಳಿದರು.
ರಾಜ್ಯ ಒಕ್ಕಲಿಗರ ಸಂಘದ ಕೊಡಗು ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ ಅವರ ಪ್ರಯತ್ನದ ಫಲವಾಗಿ ರಾಜ್ಯ ಸಂಘದಿAದ ಸೋಮವಾರಪೇಟೆ ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೂ. ೧೦.೫೫ ಕೋಟಿ ವೆಚ್ಚದ ಬಾಲಕಿಯರ ವಸತಿ ನಿಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನಂತರ ಇಲ್ಲಿನ ಒಕ್ಕಲಿಗರ ಸಮುದಾಯ ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶಕ್ಕೆ ಸಾಹಿತ್ಯ, ಆಡಳಿತ, ಶೈಕ್ಷಣಿಕ, ಕ್ರೀಡೆ, ಧಾರ್ಮಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಒಕ್ಕಲಿಗರ ಕೊಡುಗೆ ಅಪಾರವಾಗಿದೆ. ಸಂಘವು ಸಮುದಾಯದ ಸಂಘಟನೆ, ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಕಳೆದ ಬಾರಿ ಸೋಮವಾರಪೇಟೆಗೆ ಆಗಮಿಸಿದ್ದ ಸಂದರ್ಭ ವಸತಿ ಶಾಲೆ ನಿರ್ಮಿಸುವ ಭರವಸೆ ನೀಡಲಾಗಿತ್ತು. ಇದೀಗ ಅನುದಾನ ಒದಗಿಸಿ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.
ಕೊಡಗಿನಲ್ಲಿ ಒಕ್ಕಲಿಗರ ಸಂಖ್ಯೆ ಸುಮಾರು ೨ಲಕ್ಷದಷ್ಟಿದೆ. ಮುಂದಿನ ದಿನಗಳಲ್ಲಿ ಕುಶಾಲನಗರದಲ್ಲಿ ನಿವೇಶನ ಖರೀದಿಸಿ ವಿದ್ಯಾರ್ಥಿ ವಸತಿ ನಿಲಯ ಸ್ಥಾಪಿಸಲಾಗುವುದು. ಇದರೊಂದಿಗೆ ಜಿಲ್ಲೆಯಲ್ಲಿ ಬೃಹತ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡುವ ಶಿಬಿರ ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಪರ್ಚೆಸಿಂಗ್ ಕಮಿಟಿ ಅಧ್ಯಕ್ಷ ಹರಪಳ್ಳಿ ರವೀಂದ್ರ ಮಾತನಾಡಿ, ಈ ಹಿಂದೆ ಕೊಡಗು ಜಿಲ್ಲೆಯನ್ನು ಹಾಸನ ಜಿಲ್ಲೆಯವರು ಪ್ರತಿನಿಧಿಸುತ್ತಿದ್ದರು. ಈ ೩೦ ವರ್ಷಗಳ ಅವಧಿಯಲ್ಲಿ ಕೊಡಗಿನಲ್ಲಿ ಯಾವುದೇ ಸೌಲಭ್ಯ ಕಲ್ಪಿಸಿರಲಿಲ್ಲ. ಕಳೆದ ಚುನಾವಣೆಯಲ್ಲಿ ಕೊಡಗಿನವರಿಗೆ ಆದ್ಯತೆ ನೀಡಿದ ಪರಿಣಾಮ ಇದೀಗ ೧೦ ಕೋಟಿಗೂ ಅಧಿಕ ಅನುದಾನ ಲಭಿಸಿದೆ ಎಂದರು. ಸೋಮವಾರಪೇಟೆಯಲ್ಲಿ ನಿರ್ಮಾಣ ಗೊಳ್ಳುವ ವಿದ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಲ್ಲಿಯೇ ಹೃದಯ ಸಂಬAಧಿ ಕಾಯಿಲೆಗಳ ತಪಾಸಣೆ ಮತ್ತು ಪ್ರಾಥಮಿಕ ಚಿಕಿತ್ಸೆ ನೀಡುವ ಘಟಕವನ್ನು ಅರಂಭಿಸಲಾಗುವುದು ಎಂದರು.
(ಮೊದಲ ಪುಟದಿಂದ) ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಕ್ಕಲಿಗರೂ ಸೇರಿದಂತೆ ಇನ್ನಿತರ ಸಮುದಾಯದವರಿಗೆ ತೊಂದರೆಯಾಗುವ ವಿಚಾರಗಳು ಮುನ್ನೆಲೆಗೆ ಬರುತ್ತಿವೆ. ಇದರ ವಿರುದ್ಧ ಈಗಾಗಲೇ ನ್ಯಾಯಾಲಯದಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದರಲ್ಲದೆ, ಮುಂದಿನ ಪೀಳಿಗೆಗೆ ತೊಂದರೆಯಾಗದAತೆ ಈಗಿನಿಂದಲೇ ಜಾಗ್ರತೆ ವಹಿಸಬೇಕಿದೆ ಎಂದರು.ಸೋಮವಾರಪೇಟೆ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ರಾಜ್ಯ ಸಂಘದಿAದ ಬಾಲಕಿಯರ ವಸತಿ ನಿಲಯ ಸ್ಥಾಪಿಸುತ್ತಿರುವುದು ಶ್ಲಾಘನೀಯ. ಇದರೊಂದಿಗೆ ಬಾಲಕರಿಗೂ ವಸತಿ ನಿಲಯ ಸ್ಥಾಪನೆಗೆ ಕ್ರಮವಹಿಸಬೇಕೆಂದು ಮನವಿ ಮಾಡಿದರು.
ಒಕ್ಕಲಿಗರ ಸಂಘದ ನಿರ್ದೇಶಕ ಡಾ. ಅಂಜನಪ್ಪ ಮಾತನಾಡಿ, ಸಂಘದ ವತಿಯಿಂದ ಕೊಡಗಿನಲ್ಲಿ ವಸತಿ ಶಾಲೆ ಸ್ಥಾಪನೆಗೆ ಮುಂದಾಗಬೇಕಿದೆ ಎಂದರು. ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಕಿಮ್ಸ್ ಅಧ್ಯಕ್ಷ ರಘು ಗೌಡ, ಕೊಡಗು ಗೌಡ ಫೆಡರೇಷನ್ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರುಗಳು ಮಾತನಾಡಿದರು.
ವೇದಿಕೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಆರ್. ಪ್ರಕಾಶ್, ಗೌರವಾಧ್ಯಕ್ಷ ಪುಟ್ಟಸ್ವಾಮಿ, ನಿರ್ದೇಶಕರುಗಳಾದ ಚಂದ್ರಶೇಖರ್, ಹನುಮಂತರಾಯಪ್ಪ, ರಾಘವೇಂದ್ರ, ಪೂರ್ಣೇಶ್, ಪ್ರಮುಖರಾದ ಶ್ರೀನಿವಾಸ್, ಪವನ್, ಮಹಾಲಿಂಗೇಗೌಡ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ ಅವರುಗಳು ಉಪಸ್ಥಿತರಿದ್ದರು. ಬಿ.ಜೆ. ದೀಪಕ್, ತಿಲೋತ್ತಮೆ, ಜಾನಕಿ ವೆಂಕಟೇಶ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.