ಶನಿವಾರಸಂತೆ, ಆ. ೧೭ : ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ೨೦೨೩-೨೪ ನೇ ಸಾಲಿನ ಮಹಾತ್ಮಗಾಂಧಿ ನರೇಗಾ ಯೋಜನೆ ಮತ್ತು ೧೫ನೇ ಹಣಕಾಸು ಆಯೋಗದ ಅನುದಾನದಲ್ಲಿ ೨೦೨೩ರ ಏಪ್ರಿಲ್ ೧ ರಿಂದ ೨೦೨೪ರ ಮಾರ್ಚ್ ೩೧ರ ಅವಧಿಗೆ ಸಂಬAಧಿಸಿದAತೆ ಕೈಗೊಂಡ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ತಾ. ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆಯಲಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ ನೇತೃತ್ವದಲ್ಲಿ ನಡೆಯುವ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಎ.ಬಿ. ನವೀನ್ ವಹಿಸಲಿದ್ದಾರೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯೇಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.