ಗೋಣಿಕೊಪ್ಪಲು, ಆ. ೧೮: ಮುಂಜಾನೆ ವೇಳೆ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡುಕೋಣವೊಂದು ಕಾರ್ಮಿಕನ ಮೇಲೆ ದಾಳಿ ನಡೆಸಿದ ಘಟನೆ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಗ್ಗನಹಡ್ಲು ಗ್ರಾಮದ ಹಾಡಿಯಲ್ಲಿ ನಡೆದಿದೆ.

ದಾಳಿಯಿಂದ ಜೇನು ಕುರುಬರ ತಿಮ್ಮ(೪೫) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಡುಕೋಣ ದಾಳಿಗೆ ಗಾಯಾಳು ತಿಮ್ಮನ ಕಾಲಿನ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಮಿಕನ ಮೇಲೆ ಕಾಡುಕೋಣ ದಾಳಿ ನಡೆದಿದೆ ಎಂಬ ಸುದ್ದಿ ತಿಳಿದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಆಸ್ಪತ್ರೆಗೆ ತೆರಳಿ ಗಾಯಾಳು ತಿಮ್ಮನ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿ ಕೂಡಲೇ ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವ ಬಗ್ಗೆ ಸ್ಥಳದಲ್ಲಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೂಡಲೇ ಮೈಸೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ ಮಾಡಲಾಯಿತು.

ಶಾಸಕ ಎ.ಎಸ್. ಪೊನ್ನಣ್ಣನವರು ಅಧಿಕಾರಿಗಳಿಗೆ ಸೂಚನೆ ನೀಡಿ ಉತ್ತಮ ಚಿಕಿತ್ಸೆ ನೀಡಲು ನಿರ್ದೇಶನ ನೀಡಿದರಲ್ಲದೆ, ಹಾಡಿಯಲ್ಲಿ ಕಾಣಿಸಿಕೊಂಡಿರುವ ಕಾಡುಕೋಣವನ್ನು ಅರಣ್ಯಕ್ಕೆ ಅಟ್ಟುವ ಕೆಲಸ ತಕ್ಷಣವೇ ಕೈಗೊಳ್ಳಲು ಸೂಚನೆ ನೀಡಿದರು.

ಈ ಭಾಗದಲ್ಲಿ ಆಗಿಂದಾಗ್ಗೆ ವನ್ಯಜೀವಿಗಳು ಮಾನವನ ಮೇಲೆ ದಾಳಿ ನಡೆಸುತ್ತಿವೆ.ಅರಣ್ಯ ಪ್ರದೇಶದಿಂದ ಕಾಡುಕೋಣ ಸೇರಿದಂತೆ ಕಾಡಾನೆಗಳು ಹೆಚ್ಚಾಗಿ ಗಿರಿಜನರು ವಾಸ ಮಾಡುವ ಪ್ರದೇಶದತ್ತ ಲಗ್ಗೆ ಇಡುತ್ತಿವೆ.

- ಹೆಚ್.ಕೆ. ಜಗದೀಶ್