ಮಡಿಕೇರಿ, ಆ. ೧೮: ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭ ವನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಚೇಂದAಡ ಜಿ. ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಶಾಲಾ ಮುಖ್ಯ ಶಿಕ್ಷಕ, ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಈ ಶಾಲೆಯಲ್ಲಿ ಸತತವಾಗಿ ಶೇ. ೧೦೦ ಫಲಿತಾಂಶ ಬರುತ್ತಿದ್ದು, ಶಿಕ್ಷಕರ ಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿದ್ದ ಸರ್ವ ಗಣ್ಯರು ಜ್ಯೋತಿ ಬೆಳಗುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಶಾಲೆಯ ವಿದ್ಯಾರ್ಥಿಗಳ ಶಿಸ್ತು, ಸಂಯಮ, ಸ್ವಚ್ಛತೆಯ ಬಗ್ಗೆ ಮತ್ತು ಆಡಳಿತ ಮಂಡಳಿಯವರ ಸೌಹಾರ್ದತೆಯ ಕೊಡಗಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹಲವಾರು ಗಣ್ಯ ವ್ಯಕ್ತಿಗಳ ನಿದರ್ಶನದೊಂದಿಗೆ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಕಾರ್ಯನಿರ್ವಾಹಕಿ ಕರ್ನಂಡ ಎನ್. ಬೊಳ್ಳಮ್ಮ, ಆಡಳಿತಾಧಿಕಾರಿ ಪಿ.ಎ. ಲಕ್ಷ್ಮಿನಾರಾಯಣ, ಸದಸ್ಯರಾದ ಬೀನಂಡ ಎಸ್. ಪೂಣಚ್ಚ, ಮೂಕೋಂಡ. ಸಾಬು ನಂಜಪ್ಪ, ಚಾರಿಮಂಡ ಎಂ. ಮುತ್ತಪ್ಪ, ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಜರಿದ್ದರು.
ಸ್ವಾಗತವನ್ನು ಶಾಲಾ ಮುಖ್ಯಶಿಕ್ಷಕ ಹೆಚ್.ಡಿ. ಲೋಕೇಶ್ ನೆರವೇರಿಸಿದರು. ಶಿಕ್ಷಕಿ ವೈ. ಪ್ರಮೀಳಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಎ.ಸಿ. ಸುನೀತ ವಂದಿಸಿದರು.