ಪೊನ್ನಂಪೇಟೆ, ಆ. ೧೮: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಮತ್ತು ರಾಷ್ಟಿçÃಯ ಸೇವಾ ಯೋಜನೆ ಘಟಕದ ಉದ್ಘಾಟನೆಯನ್ನು ಕಾವೇರಿ ಕಾಲೇಜು ಸಭಾಂಗಣದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಭಾರತ ಸರ್ಕಾರದ ಜಿಎಸ್ಟಿ ಮತ್ತು ಕಸ್ಟಮ್ಸ್ ಅಧೀಕ್ಷಕರಾದ ಎಂ.ಎ. ಬೋಪಣ್ಣ ಅವರು ದೀಪ ಬೆಳಗಿಸುವ ಮೂಲಕ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ವಿದ್ಯಾರ್ಥಿ ನಾಯಕರಿಗೆ ಬ್ಯಾಡ್ಜ್ ವಿತರಿಸಿ ಮಾತನಾಡಿ, ಪದವಿಪೂರ್ವ ಶಿಕ್ಷಣದ ಹಂತ ವಿದ್ಯಾರ್ಥಿಗಳ ಪಾಲಿಗೆ ಅತ್ಯಂತ ಮಹತ್ವದ ಘಟ್ಟವಾಗಿದ್ದು, ಈ ಹಂತದಲ್ಲಿ ಶಿಕ್ಷಣದ ಕಡೆಗೆ ಹೆಚ್ಚು ಗಮನ ನೀಡಿದರೆ, ತಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆಮಾಡಿ. ಸಂತೆ ಹಾಗೂ ಅಂಗಡಿಗಳಿಗೆ ತೆರಳುವಾಗ ಕೈಯಲ್ಲಿ ಒಂದು ಬಟ್ಟೆ ಬ್ಯಾಗ್ ಹಿಡಿದುಕೊಂಡು ಹೋಗಿ, ಪ್ಲಾಸ್ಟಿಕ್ ಚೀಲಗಳ ಉಪಯೋಗ ಕಡಿಮೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮತ್ತೊಬ್ಬ ಅತಿಥಿ ಭೂಗೋಳ ಶಾಸ್ತç ಉಪನ್ಯಾಸಕ ಡಾ. ಎಸ್.ಆರ್. ತಿರುಮಲಯ್ಯ ಹೂ ಗಿಡಕ್ಕೆ ನೀರೆರೆಯುವ ಮೂಲಕ ರಾಷ್ಟಿçÃಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಮಹಾತ್ಮಾ ಗಾಂಧೀಜಿಯ ಆಶಯದಂತೆ ಅನುಭವ ಮತ್ತು ಪರಿಶ್ರಮಕ್ಕೆ ರಾಷ್ಟಿçÃಯ ಸೇವಾ ಯೋಜನೆಯಲ್ಲಿ ಹೆಚ್ಚು ಗಮನ ಹರಿಸಲಾಗಿದೆ. ರಾಷ್ಟç ಪ್ರಗತಿಯಾಗಬೇಕಾದರೆ ನಮ್ಮ ಯುವಜನಾಂಗ, ಅದರಲ್ಲಿಯೂ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನರಿತು ಬದುಕಿನೊಡನೆ ನೇರ ಸಂಪರ್ಕವಿಟ್ಟುಕೊಳ್ಳಬೇಕು ಎಂಬುದು ಗಾಂಧೀಜಿ ಅವರ ಕನಸಾಗಿತ್ತು. ಸೇವೆಯ ಮೂಲಕ ಸಮಾಜದ ಅರಿವು ಮೂಡಿಸುವುದು ರಾಷ್ಟಿçÃಯ ಸೇವಾ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಇದರಿಂದ ಸ್ವಯಂಸೇವಕರ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಸಮಾಜಸೇವೆಯ ಪ್ರಜ್ಞೆ ಜಾಗೃತಗೊಳ್ಳುತ್ತದೆ ಎಂದರು.
ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಚೇತನ್ ಚಿಣ್ಣಪ್ಪ, ರಾಷ್ಟಿçÃಯ ಸೇವಾ ಯೋಜನಾಧಿಕಾರಿ ವಿಪ್ರ ನೀಲಮ್ಮ, ಹಿರಿಯ ಉಪನ್ಯಾಸಕಿ ಎಂ.ಕೆ. ಪದ್ಮ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ನಿತಿನ್ ಬೋಪಣ್ಣ ಕೆ.ಬಿ., ಅರ್ಚನ ಕೆ.ಬಿ., ರೋನಿಕ ಕೆ.ಎನ್., ವಿಪಿನ್ ಎ. ಉಪಸ್ಥಿತರಿದ್ದರು.
ಎಂ.ಬಿ. ಪೂವಮ್ಮ ಅತಿಥಿಗಳ ಪರಿಚಯ ಮಾಡಿದರು. ಲೆಫ್ಟಿನೆಂಟ್ ಎಂ.ಆರ್. ಅಕ್ರಮ್ ವಿದ್ಯಾರ್ಥಿ ನಾಯಕರ ಪರಿಚಯ ಮಾಡಿದರು. ಜನನಿ ಮತ್ತು ತಂಡ ಸ್ವಾಗತ ನೃತ್ಯ ಮಾಡಿದರು. ದೀಪ ಮತ್ತು ತಂಡ ಪ್ರಾರ್ಥನೆ ಮಾಡಿದರು.