ಮಡಿಕೇರಿ, ಆ. ೧೮: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾAಶದ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೧೨ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ ೦೮೨೭೨-೨೨೫೫೨೮, ೨೨೦೨೧೪ ಹಾಗೂ ನಿಲಯಪಾಲಕರು ೯೭೪೨೧೧೬೬೦೧ ಮತ್ತು ೯೯೭೨೧೭೧೨೬೬ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ. ದಿವಾಕರ ತಿಳಿಸಿದ್ದಾರೆ.