ಮಡಿಕೇರಿ, ಆ. ೧೮: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ೨೦೨೪ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ. ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.
ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ [ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲೂ] ಹಾಗೂ ಸ್ನಾತಕೋತ್ತರ ಪಿ.ಜಿ. ಕೋರ್ಸ್ಗಳದ [ಎಂ.ಎ, ಎಂ.ಎ - ಪತ್ರಿಕೋದ್ಯಮ, ಎಂ.ಕಾA, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್,ಡಬ್ಲೂ] [ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್] ಕೋರ್ಸ್ಗಳಿಗೆ ಪ್ರವೇಶಾತಿ ಆರಂಭವಾಗಿರುತ್ತದೆ.
ಪ್ರವೇಶಾತಿಗೆ ಎಸ್.ಎಸ್.ಲ್.ಸಿ ಅಂಕಪಟ್ಟಿ ಜೆರಾಕ್ಸ್, ಪಿ.ಯು.ಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್. ಪದವಿ ಅಂಕಪಟ್ಟಿ ಜೆರಾಕ್ಸ್(ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ ಹೆಸರು, IಈSಅ ಕೋಡ್. ನಾಲ್ಕು ಫೋಟೋಗಳು. ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಃPಐ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್ / ಫೋನ್ ಪೇ / ಗೂಗಲ್ ಪೇ / ನೆಟ್ ಬ್ಯಾಂಕಿAಗ್ - ಶುಲ್ಕ ಪಾವತಿಗೆ.
ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಬಹುದು ಮತ್ತು ೯೮೪೪೩೯೫೯೮೬, ೮೨೯೬೨೧೫೭೧೪, ೯೪೮೩೫೭೦೯೦೦, ೭೪೧೧೨೩೩೦೦೭ ದೂರವಾಣಿ ಮುಖಾಂತರ ವಿವರ ಪಡೆಯಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಡಿಕೇರಿ ಪ್ರಾದೇಶಿಕ ಕೇಂದ್ರ ನಿರ್ದೇಶಕರಾದ ಸ್ಮೀತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.