ರಾಹುಲ್ ಗಾಂಧಿ ಪೌರತ್ವ ರದ್ದು ಅರ್ಜಿ: ಪಿಐಎಲ್ ಎಂದು ಪರಿಗಣಿಸಿದ ಹೈಕೋರ್ಟ್

ನವದೆಹಲಿ, ಆ. ೨೦: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಗೃಹ ಸಚಿವಾಲಯಕ್ಕೆ (ಎಂಹೆಚ್‌ಎ) ನಿರ್ದೇಶನ ನೀಡುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಮನವಿಯನ್ನು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಎಂದು ಪರಿಗಣಿಸುವುದಾಗಿ ಹೈಕೋರ್ಟ್ ಮಂಗಳವಾರ ಹೇಳಿದೆ. ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿ ಸಂಜೀವ್ ನರುಲಾ ಅವರಿದ್ದ ಪೀಠವು ಸುಬ್ರಮಣಿಯನ್ ಸ್ವಾಮಿ ಅವರು ರಿಟ್ ನಿರ್ದೇಶನಗಳನ್ನು ನೀಡಲು ನ್ಯಾಯಾಲಯವು ಕಾನೂನುಬದ್ಧವಾಗಿ ಜಾರಿಗೊಳಿಸಬಹುದಾದ ಹಕ್ಕುಗಳನ್ನು ತೋರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದೆ. ಆದರೆ ಈ ವಿಷಯವು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿರುವುದರಿAದ ಅರ್ಜಿಯ ಸ್ವರೂಪವನ್ನು ಸಾರ್ವಜನಿಕ ಹಿತಾಸಕ್ತಿ ವಿಷಯವಾಗಿ ಮಾತ್ರ ಸಮರ್ಥಿಸಬಹುದು ಎಂದು ಸೂಚಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ, ನ್ಯಾಯಾಲಯವು ಸೂಕ್ತವೆಂದು ಪರಿಗಣಿಸಿದರೆ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ವಿಶೇಷ ಪೀಠಕ್ಕೆ ವರ್ಗಾಯಿಸಬಹುದು ಎಂದು ಹೇಳಿದರು. ತಮ್ಮ ಕ್ರಮಗಳು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ರಾಷ್ಟಿçÃಯ ಕಾಳಜಿಯ ವಿಷಯ ಎಂದು ತಿಳಿಸಿದರು.

ಹೆಚ್.ಡಿ.ಕೆ. ವಿರುದ್ಧ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ ಎಸ್.ಐ.ಟಿ. ಪತ್ರ

ಬೆಂಗಳೂರು, ಆ. ೨೦: ಮುಡಾ ಹಗರಣ ಸಂಬAಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ೨೦೦೭ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪೆನಿಗೆ ೫೫೦ ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣ ಸಂಬAಧ ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್‌ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಅಕ್ರಮ ಗಣಿಗಾರಿಕೆ ಕುರಿತು ೨೦೧೧ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್‌ಐಟಿ ತನಿಖೆ ನಡೆಸುತ್ತಿದೆ.

ವಿದ್ಯಾರ್ಥಿನಿಗೆ ಚೂರಿ ಇರಿದ ಅಪ್ರಾಪ್ತ

ಪುತ್ತೂರು, ಆ. ೨೦: ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಚಾಕುವಿನಿಂದ ಇರಿದಿದ್ದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೊಬೈಲ್ ಕೊಟ್ಟಿಲ್ಲ ಎಂದು ಬಾವಿಗೆ ಹಾರಿದ ವಿದ್ಯಾರ್ಥಿ ಸಾವು

ಉಡುಪಿ, ಆ. ೨೦: ಉಡುಪಿಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ ೧೭ ವರ್ಷದ ಪ್ರಥಮೇಶ್ ಮೃತದೇಹ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ. ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮೇಶ್ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಪ್ರಥಮೇಶ್ ಮನೆ ಬಿಟ್ಟು ಹೋಗಿದ್ದನು. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸ್ನೇಹಿತರು ಹುಡುಕಾಟ ನಡೆಸಿದ್ದರೂ ಪ್ರಥಮೇಶ್ ಪತ್ತೆಯಾಗಿರಲಿಲ್ಲ. ಆದರೆ ಇಂದು ಬಾವಿಯಲ್ಲಿ ಪ್ರಥಮೇಶ್ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

ಮಂಗಳೂರು, ಆ. ೨೦: ಫುಟ್ಬಾಲ್ ಪಂದ್ಯದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಭೆ ಉಂಟಾಗಿ, ತಂಡವೊAದು ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ, ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬAಧ ಮಂಗಳೂರು ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕಳೆದ ಆ. ೧೪ ರಂದು ಎರಡು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ ೧೯ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು, ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಆರೋಪಿಗಳು ಸಂತ್ರಸ್ತರ ಮೇಲೆ ಹಲ್ಲೆ ನಡೆಸುವಾಗ ಚಿತ್ರೀಕರಿಸಿದ್ದಾರೆ, ಹಲ್ಲೆ ನಡೆಸಿದ ನಂತರ ಸಂತ್ರಸ್ತರನ್ನು ಬಿಡಲಾಯಿತು. ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ದರ್ಶನ್‌ಗೆ ಸಿಗದ ಮನೆಯೂಟ ಭಾಗ್ಯ

ಬೆಂಗಳೂರು, ಆ. ೨೦: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.೫ಕ್ಕೆ ಮುಂದೂಡಿದೆ. ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠವು, ಜೈಲು ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿತ್ತು. ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ತಿಳಿಸಿತ್ತು. ಅಂತೆಯೇ ನಿರ್ಧಾರವನ್ನು ಹೈಕೋರ್ಟ್ಗೆ ನೀಡಿದ್ದ ಜೈಲು ಅಧಿಕಾರಿಗಳು ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದರು. ವೈದ್ಯಾಧಿಕಾರಿಗಳು ದರ್ಶನ್‌ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ಹೈಕೋರ್ಟ್ನಲ್ಲಿ ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬAಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಈ ವೇಳೆ ದರ್ಶನ್ ಪರ ವಕೀಲೆ ಸಂಜೀವಿನಿ ನಾವದಗಿ ಅವರು ವಾದ ಮಂಡಿಸಿ, ನಮ್ಮ ಕೋರಿಕೆಯನ್ನು ತಿರಸ್ಕರಿಸಿರುವ ಆದೇಶವನ್ನು ಪರಿಶೀಲಿಸಿಲ್ಲ. ಅದನ್ನು ನೋಡಿ ಮೆರಿಟ್ ಮೇಲೆ ವಾದಿಸಲಾಗುವುದು. ನ್ಯಾಯಾಲಯ ಸಮಯ ನಿಗದಿಪಡಿಸಬಹುದು ಎಂದು ತಿಳಿಸಿದರು. ಇದಕ್ಕೆ ಒಪ್ಪಿದ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟೆಂಬರ್ ೫ ಕ್ಕೆ ಮುಂದೂಡಿತು.